ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಇಂದಿರಾ ನಗರದ ಯುವತಿ ಅಪ್ಸಾನಾ ಬೇಗಂ ರಾಜಿಭಾಯಿ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ೧೭ ರಂದು ನಸುಕಿನ ಜಾವ ೨ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಇರುವ ಟಾಯಲೆಟ್ ಗೆ ಹೋಗಿ ಬರುವದಾಗಿ ಹೇಳಿ ಹೋಗಿದ್ದು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ ಎಂದು ಯುವತಿಯ ತಂದೆ ಮೌಲಾಸಾಬ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
