Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾಯೋಗಿ ವೇಮನರ ಜೀವನ ಸಂದೇಶ ಎಲ್ಲರಿಗೂ ಪ್ರೇರಣೆಯಾಗಲಿ :ಯತ್ನಾಳ
(ರಾಜ್ಯ ) ಜಿಲ್ಲೆ

ಮಹಾಯೋಗಿ ವೇಮನರ ಜೀವನ ಸಂದೇಶ ಎಲ್ಲರಿಗೂ ಪ್ರೇರಣೆಯಾಗಲಿ :ಯತ್ನಾಳ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜದಲ್ಲಿರುವಂತಹ ತಪ್ಪು, ದೋಷಗಳನ್ನು ಕವಿತೆ ಹಾಗೂ ವಚನಗಳ ಮೂಲಕ ಅವರ ವಿಚಾರದಾರೆಗಳನ್ನು ಸಮಾಜಕ್ಕೆ ಕೊಟ್ಟಂತಹ ಅನೇಕ ಮಹಾ ಪುರುಷರುಗಳನ್ನು ಸ್ಮರಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ನಗರ ಶಾಸಕರಾದ ಬಸನಗೌಡ ರಾ. ಪಾಟೀಲ(ಯತ್ನಾಳ) ಹೇಳಿದರು.
ಇಂದು ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಜಾತಿಗಳನ್ನು ಮೀರಿ ಸಮಾಜದಲ್ಲಿ ಬದಲಾವಣೆಯನ್ನು ಮಾಡಿ, ಕ್ರಾಂತಿ ಮಾಡಿದಂತಹ ಸತ್ಪುರುಷರಾದ ನಮ್ಮ ಮಹಾಯೋಗಿ ವೇಮನರು ಹದಿನೈದನೇ ಶತಮಾನದಲ್ಲಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸಮಾಜವನ್ನು ಸರಿದಾರಿಗೆ ತರಲು ಯತ್ನಿಸಿದ ಮಹಾಯೋಗಿ ವೇಮನರು. ಅವರ ವಚನಗಳು ಇಂದು ನಮಗೆ ದಾರಿದೀಪವಾಗಿವೆ. ಸುಮಾರು ೧೫ ಸಾವಿರ ಪದ್ಯಗಳನ್ನು ಬರೆದು ಸಮಾಜಕ್ಕೆ ಒಂದು ಒಳ್ಳೆಯ ಕೊಡುಗೆಯನ್ನು ನಮಗೆ ನೀಡಿದ್ದಾರೆ. ಮಹಾಯೋಗಿಯ ಜೀವನ ಸಂದೇಶ ಎಲ್ಲರಿಗೂ ಪ್ರೇರಣೆಯಾಗಲಿ. ಮಹನೀಯರ ಸಾರಿದ ತತ್ವ ಸಿದ್ದಾಂತಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯಬೇಕು. ಹುಟ್ಟಿನಿಂದಲೇ ಎಲ್ಲರೂ ಸಮಾನರು ಎಂದು ಸಾರಿದ ವೇಮನರ ಬದುಕು ನಮಗೆ ಸ್ಪೂರ್ತಿಯಾಗಬೇಕು. ನಮ್ಮ ದೇಶ ಸಿರಿ ಸಂಪತ್ತನ್ನು ಹೊಂದಿದ ದೇಶ ಅದರೊಂದಿಗ ಹೃದಯ ಸಂಪತ್ತನ್ನು ಹೊಂದಿದೆ. ಡಾ. ಅಂಬೇಡ್ಕರ ಅವರು ದೇಶದಲ್ಲಿ ಅಶ್ಪೃಶ್ಯತೆ ಕುರಿತು ತಮ್ಮ ಜೀವನದ ಉದ್ದಕ್ಕೂ ಹೋರಾಡಿ ಎಲ್ಲರೂ ಒಂದೇ ಎಂದು ಜಗತ್ತಿಗೆ ಸಾರಿ ಸಾರಿ ಹೇಳಿದ ಮಹಾನ ನಾಯಕರಾಗಿದ್ದರು. ಇಂತಹ ಮಹನೀಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ತಿಳಿಸಿದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾ ಯೋಗಿ ವೇಮನರು ಅವರು ಮೂಡನಂಬಿಕೆ, ಡಂಬಾಚಾರವನ್ನು ಸಮಾಜದಿಂದ ಕಿತ್ತೊಗೆದು, ಮೇಲು ಕೀಳು ಎನ್ನುವುದನ್ನು ಹೊಡೆದೊಡಿಸಿದ ಮಹಾನ ಯೋಗಿ ವೇಮನರು ಸಮ ಸಮಾಜವನ್ನು ಸುಧಾರಿಸುವ ನಿಟ್ಟಿನಲ್ಲಿ ಚರಿತ್ರೆಗಳನ್ನು ಬರೆದವರು ವೇಮನರು ನಮ್ಮ ದೇಶದ ಮಹಾನ ಸಾಕ್ರಟಿಸ್ ಆಗಿದ್ದರು. ಅವರು ಹಾಕಿಕೊಟ್ಟ ಆದರ್ಶ ಹಾಗೂ ಮಾರ್ಗದರ್ಶನಗಳನ್ನು ಮುಂದಿನ ಪೀಳಿಗೆಗೆ ತಿಳಿ ಹೇಳಬೇಕು ಎಂದು ಅವರು ಹೇಳಿದರು.
ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನಗರ ಶಾಸಕರಾದ ಬಸನಗೌಡ ರಾ.ಪಾಟೀಲ (ಯತ್ನಾಳ) ಮಹಾಯೋಗಿ ವೇಮನರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಾಹಿತಿಗಳಾದ ಶಿವಶರಣಪ್ಪ ಶಿರೂರು ವಿಶೇಷ ಉಪನ್ಯಾಸ ನೀಡಿದರು. ಹೇಮರಡ್ಡಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುರೇಶ ದೇಸಾಯಿ ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ತಹಶೀಲ್ಧಾರ ಪ್ರಶಾಂತ ಚನಗೊಂಡ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸ್ವಾಗತಿಸಿದರು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ವಂದಿಸಿದರು. ಎಚ್.ಎ ಮಮದಾಪುರ ಕಾರ್ಯಕ್ರಮವನ್ನು ನಿರೂಪಿಸಿದರು.
ಸಮಾಜದ ಮುಖಂಡರುಗಳಾದ ವಿ.ಸಿ ನಾಗಠಾಣ, ಪಾಂಡು ಸಹುಕಾರ ದೊಡಮನಿ, ಬಸನಗೌಡ ಪಾಟೀಲ, ಎಸ್.ಎಚ್ ನಾಡಗೌಡ, ಕಂಠೀರವ ಕುಲ್ಲೋಳ್ಳಿ, ಶ್ರೀಮತಿ ಮಹಾದೇವಿ ತೆಲಗಿ, ಸರೋಜಿನಿ ಚೌಧರಿ, ಸಂಗು ಸಜ್ಜನ, ಭೀಮರಾಯ ಜಿಗಜಿಣಗಿ, ವಿದ್ಯಾವತಿ ಅಂಕಲಗಿ, ದೇವೇಂದ್ರ ಮೀರೇಕರ, ಸೋಮನಗೌಡ ಕಲ್ಲೂರ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ನಿರ್ದೇಶಕರು, ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

ಶರಣರ, ಮಹಾಪುರುಷರ, ಸತ್ಪುರುಷರ ಮತ್ತು ದೇಶಕ್ಕಾಗಿ ಬದುಕನ್ನು ಸಮರ್ಪಿಸಿಕೊಂಡವರ ಜಯಂತಿಗಳು ಈ ದೇಶದಲ್ಲಿ ನಾಡಿನಲ್ಲಿ ಸಾಂಕೇತಿಕವಾಗದೆ ಹೃದಯಪೂರಕವಾಗಿ ಆಚರಿಸುವಂತಾಗಬೇಕು ಅಂದಾಗ ಮಾತ್ರ ಆ ಸಂದೇಶಗಳನ್ನು ಮನೆ ಮನಗಳಲ್ಲಿ ತಲುಪಿಸಲು ಸಾಧ್ಯ. ಎಲ್ಲ ಸಮುದಾಯದವರು ದೇವಾಲಯಗಳನ್ನು ಮಾತ್ರ ಕಟ್ಟದೆ ಧಾರ್ಮಿಕ ಭಾವನೆಗಳ ಜೊತೆಗೆ ಜೀವಂತ ದೇವಾಲಯವಾದ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದಲ್ಲಿ ಎಲ್ಲ ಸಮುದಾಯದ ನಿಜವಾದ ದೇವರುಗಳು ಎಲ್ಲ ಮಕ್ಕಳು ಓದಲಿಕ್ಕೆ ಸಾಧ್ಯ. ವೇಮನ ವಚನಗಳನ್ನು ಇಡೀ ರಾಜ್ಯಕ್ಕೆ ಪರಿಚಯಿಸಿದ ಹಾಗೂ ಅನುವಾದಿಸಿದ ಸಾಕಷ್ಟು ಸಮಯ ತೆಗೆದುಕೊಂಡ ದಿ.ಎಸ್.ಆರ್ ಪಾಟೀಲ್, ಹಾಗೂ ದಿ. ಕೆ.ಎಚ್ ಪಾಟೀಲ್ ಅವರು ವೇಮನರ ಕುರಿತು ಅಧ್ಯಯನ ಹಾಗೂ ಸಂಶೋಧನೆ ಮಾಡಿ ಜನವರಿ ೧೯ ಕ್ಕೆ ವೇಮನ ಜಯಂತಿ ಆಚರಿಸುವಂತೆ ಐತಿಹಾಸಿಕ ನಿರ್ಧಾರ ತೆಗೆದುಕೊಂಡು ಕಳೆ ೫ ವರ್ಷಗಳಿಂದ ಸರ್ಕಾರಿ ಜಯಂತಿಯಾಗಿ ಆಚರಿಸಲು ಕ್ರಮ ವಹಿಸಲಾಗುತ್ತಿದೆ ಅವರನ್ನು ಇಂತಹ ಸಂದರ್ಭದಲ್ಲಿ ನಾವು ಸ್ಮರಿಸಬೇಕು.”

– ಸಂಗಮೇಶ ಅಪ್ಪಾಸಿ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.