Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೂ.10 ಕೋಟಿ ಅನುದಾನದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಯತ್ನಾಳ ಭೂಮಿಪೂಜೆ
(ರಾಜ್ಯ ) ಜಿಲ್ಲೆ

ರೂ.10 ಕೋಟಿ ಅನುದಾನದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಯತ್ನಾಳ ಭೂಮಿಪೂಜೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನೀವುಗಳು ನೀಡಿರುವ ಒಂದು ಮತ ಇಡೀ ವಿಜಯಪುರ ನಗರದ ಚಿತ್ರಣವನ್ನೇ ಬದಲಿಸಿ, ದೇಶದಲ್ಲಿ ಅತ್ಯುತ್ತಮ ಗಾಳಿ ಬಿಸುವ ನಗರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಬರಲು ಸಾಧ್ಯವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರದ ಶ್ರೀ 1008 ಸಹಸ್ರಫಣಿ ಪಾರ್ಶ್ವನಾಥ ಜೈನ್ ಮಂದಿರ ಹತ್ತಿರ ಭಾನುವಾರ ಲೋಕೋಪಯೋಗಿ ಇಲಾಖೆಯ ಎಸ್.ಎಚ್.ಡಿ.ಪಿ ಯೋಜನೆಯಡಿ ಮಂಜೂರಿಸಿದ ರೂ.10 ಕೋಟಿ ಅನುದಾನದಲ್ಲಿ ಸೋಲಾಪುರ ರಸ್ತೆಯಿಂದ ಇಟ್ಟಂಗಿಹಾಳ ಹೋಗುವ ರಿಂಗ್ ರಸ್ತೆ ವರೆಗೆ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಇರುವ ಎಂ.ಜಿ ರಸ್ತೆ ಮೀರಿಸುವಂತೆ ನಗರದ ರಸ್ತೆಗಳು ಅಭಿವೃದ್ಧಿಗೊಂಡಿವೆ. ರಸ್ತೆಗಳ ಅಗಲೀಕರಣ ವೇಳೆ ಹಲವರು ಬೈದರು. ನಂತರ ಅವರೇ ಬಂದು ಥ್ಯಾಂಕ್ಸ್ ಹೇಳಿದ್ದಾರೆ. ಅದಕ್ಕೆ ಕಾರಣ ನಗರದಲ್ಲಿರುವ ರಸ್ತೆಗಳನ್ನು ವಿಶಾಲವಾಗಿ ಹಾಗೂ ಗುಣಮಟ್ಟದಿಂದ ಅಭಿವೃದ್ಧಿಗೊಳಿಸಿದಕ್ಕೆ ಸುಗಮ ಸಂಚಾರ, ದೂಳುಮುಕ್ತ ಜೊತೆಗೆ ನಿವೇಶನಗಳ ಬೆಲೆಯೂ ದುಪ್ಪಟ್ಟಾಗಿವೆ ಎಂದರು.
ವಿದೇಶ ಸೇರಿ ಬೇರೆ ಬೇರೆ ಕಡೆಗಳಲ್ಲಿ ನೆಲೆಸಿರುವ ನಮ್ಮವರು 8-10 ವರ್ಷಗಳ ನಂತರ ವಿಜಯಪುರಕ್ಕೆ ಬಂದರೆ, ಇದು ನಮ್ಮ ನಗರವೇ ಎಂದು ಕೆಲ ಕ್ಷಣ ಗೊಂದಲದಲ್ಲಿರುತ್ತಾರೆ. ಅಷ್ಟೊಂದು ಅಭಿವೃದ್ಧಿಯಲ್ಲಿ ಬದಲಾವಣೆ ಆಗಿದೆ. ಅದೇ ರೀತಿ ಸಹಸ್ರಫಣಿ ಪಾರ್ಶ್ವನಾಥ ಜೈನ್ ಮಂದಿರ ರಸ್ತೆಯೂ ಅಭಿವೃದ್ಧಿಗೊಳ್ಳಲಿದೆ. ಇನ್ನೊಂದು ರಿಂಗ್ ರೋಡ ಸಹ ಮಾಡಲಾಗುವುದು ಎಂದು ತಿಳಿಸಿದರು.
ವಕ್ಫ್ ಕಾನೂನು ಎಷ್ಟು ಕೆಟ್ಟದ್ದಾಗಿದೆ ಎಂಬುವುದು ಬಹಳಷ್ಟು ಅಧಿಕಾರಿಗಳಿಗೂ ಗೊತ್ತಿಲ್ಲ. ಅದರ ಬಗ್ಗೆ ಯಾರು ಹೆದರಬೇಡಿ, ಯಾರೊಬ್ಬರಿಗೂ ಯಾವುದೇ ಸಮಸ್ಯೆ ಆಗಲು ನಾವು ಬಿಡುವುದಿಲ್ಲ. ರಾಜ್ಯದಲ್ಲಿ ಸಂಚರಿಸಿ ವಾಸ್ತವ ತಿಳಿದುಕೊಂಡು, ಎರಡು ಬಾರಿ ದೆಹಲಿಗೆ ತೆರಳಿ ಸುಮಾರು 2500 ಪುಟಗಳ ವರದಿ ಸಲ್ಲಿಸಿದ್ದೇವೆ. ತಿದ್ದುಪಡಿ ಬದಲಾಗಿ, ಸಂಪೂರ್ಣ ವಕ್ಫ್ ರದ್ದು ಮಾಡುವಂತೆಯೂ ಮನವಿ ಮಾಡಿಕೊಂಡಿದ್ದೇವೆ. ಎಲ್ಲರೂ ಒಂದಾಗಿ, ಯಾರು ಏನು ಮಾಡುವುದಿಲ್ಲ ಎಂದು ಸಲಹೆ ನೀಡಿದರು.
ಪ್ರಜಾತಂತ್ರದ ಜಾತ್ರೆ ಅಂದರೆ ಮತದಾನ. ಎಲ್ಲರೂ ಜಾತ್ರೆಗಳಿಗೆ ಹೋದಂತೆ ಮತದಾನ ಬಂದಾಗ ಮನೆಯಲ್ಲಿ ಕುಳಿತುಕೊಳ್ಳದೆ, ಮತ ಚಲಾಯಿಸಲು ಹೋಗಿ ಒಳ್ಳೆಯವರನ್ನು ಆಯ್ಕೆ ಮಾಡಿದರೆ ಹೀಗೆ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದರು.
ಮುಖಂಡರಾದ ಸಾಯಬಣ್ಣ ಬೋವಿ, ಶೀತಲಕುಮಾರ ಓಗಿ, ಮಧುಸೂಧನ ಯಲಗುದ್ರಿ, ವಿ.ಸಿ.ಕುಲಕರ್ಣಿ, ಪ್ರಕಾಶ ಗೊಂಗಡಿ, ಸುನೀಲ ಉಳ್ಳಾಗಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.