ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜ. ೨೧ ರಿಂದ ೨೪ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
೨೨ರ ಬೆಳಿಗ್ಗೆ ೯.೩೦ಕ್ಕೆ ಮುದ್ದೇಬಿಹಾಳ ತಾಲೂಕಿನ ಶಿರೋಳ್ ರಸ್ತೆಯಲ್ಲಿರುವ ಅಲೆಮಾರಿ ಜನಾಂಗದ ವಾಸಸ್ಥಾನಕ್ಕೆ ಭೇಟಿ ನೀಡಲಿದ್ದಾರೆ, ಮದ್ಯಾಹ್ನ ೧೨ ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುರು. ಮದ್ಯಾಹ್ನ ೨.೩೦ಕ್ಕೆ ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವುರು. ಮದ್ಯಾಹ್ನ ೩.೩೦ಕ್ಕೆ ವಿಜಯಪುರ ಜಿಲ್ಲೆಯ ಡೊಂಕಮಡು ಗ್ರಾಮಕ್ಕೆ ಭೇಟಿ ನೀಡುವುರು.
೨೩ರ ಬೆಳಿಗ್ಗೆ ೯.೩೦ಕ್ಕೆ ರಾಷ್ಟ್ರೀಯ ಕಾನೂನು ಶಾಲೆಯ ಡಾ.ಬಾಬು ಜಗಜೀವನರಾಮ್ ಸಂಶೋಧನಾ ಸಂಸ್ಥೆ, ಸಾಮಾಜಿಕ ಪ್ರತ್ಯೇಕತೆ ಮತ್ತು ಒಳಗೊಳ್ಳುವಿಕೆ ನೀತಿಯ ಅಧ್ಯಯನ ಕೇಂದ್ರ ಹಾಗೂ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಸಂವಿಧಾನ, ಸಾಮಾಜಿಕ ನ್ಯಾಯದ ಕಾನೂನುಗಳ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸುವರು. ಮದ್ಯಾಹ್ನ ೧.೩೦ಕ್ಕೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮಕ್ಕೆ ಭೇಟಿ ನೀಡುವರು. ಸಂಜೆ ೫ಗಂಟೆಗೆ ವಿಜಯಪುರ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು.
ಜ.೨೪ರ ಬೆಳಿಗ್ಗೆ ೧೧ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ, ಎಸ್. ಎಚ್.ಡಬ್ಲೂ ಜಿಲ್ಲೆಯಲ್ಲಿ ಜಾರಿಯಾದ ಬಗ್ಗೆ ಹಾಗೂ ಪ್ರಕರಣಗಳು ದಾಖಲಾದ ಬಗ್ಗೆ, ಅಂಕಿಅAಶಗಳೊAದಿಗೆ ಚರ್ಚೆ ಹಾಗೂ ಸರ್ಕಾರಿ, ಖಾಸಗಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಕುರಿತು ದಾಖಲಾದ ಪ್ರಕರಣಗಳು, ಮಹಿಳಾ ದೌರ್ಜನ್ಯ ಪ್ರಕರಣ, ಮಹಿಳಾ ಮಿಸಲಾತಿ, ಕಾಲೇಜಿನ ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆ ಕ್ಕುರಿತು ಸಭೆ ನಡೆಸಲಾಗುವದು. ಮದ್ಯಾಹ್ನ ೧ಗಂಟೆಗೆ ಪತ್ರಿಕಾ ಗೋಷ್ಠಿ ನಡೆಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
