ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ” (ಬೇಟಿ ಪಡಾವೋ ಬೇಟಿ ಬಚಾವೋ) ಯೋಜನೆಯು ೧೦ ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ವಿನೂತನವಾಗಿ ದಶಮಾನೋತ್ಸವ ಸರಣಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಜ.೨೨ರ ಬೆಳಿಗ್ಗೆ ೯ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಹಿ ಸಂಗ್ರಹ, ಪ್ರತಿಜ್ಞಾ ವಿಧಿ ಬೋಧನೆ ಹಾಗೂ ಮಹಿಳಾ ಸಿಬ್ಬಂದಿಗಳಿಂದ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
