Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ3,048 ಎಕರೆ ಸ್ವಾಧೀನ
(ರಾಜ್ಯ ) ಜಿಲ್ಲೆ

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ3,048 ಎಕರೆ ಸ್ವಾಧೀನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೂ.457 ಕೋಟಿ ಬಿಡುಗಡೆಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಉದಯರಶ್ಮಿ ದಿನ

ವಿಜಯಪುರ: ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಬಗ್ಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಂಬಂದಪಟ್ಟ ಎಲ್ಲ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಭೂಸ್ವಾಧೀನಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಯೋಜನೆಯಿಂದ 52,700 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಲ್ಲಿ 37,200 ಎಕರೆ ಜಮೀನು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲೇ ಇದೆ. ಈಗಾಗಲೇ ವಿತರಣಾ ಕಾಲುವೆ, ಉಪಕಾಲುವೆ, ಹೊಲಗಾಲುವೆ ಕಾಮಗಾರಿಗಳೆಲ್ಲ ಮುಗಿದು ನೀರು ಹರಿಯುತ್ತಿದೆ. ಇದರ ಪ್ರಯೋಜನ ರೈತರಿಗೂ ಆಗುತ್ತಿದೆ ಎಂದು ಹೇಳಿದರು.
ಈ ಯೋಜನೆಗೆ ಅಗತ್ಯ ಜಮೀನು ಬಿಟ್ಟುಕೊಡುವಂತೆ ರೈತರಿಗೆ ಮನವಿ ಮಾಡಿಕೊಂಡಿದ್ದೆ. ರೈತರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಅಂಥವರಿಗೆ ಈಗ ಪರಿಹಾರ ಹಣ ನೀಡಲು ಸಬೂಬು ಹೇಳುತ್ತಿರುವುದು ಸರಿಯಲ್ಲ. ಆದಷ್ಟು ಬೇಗ ಪ್ರಕ್ರಿಯೆ ಮುಗಿಯಬೇಕು ಎಂದು ಅವರು ಸೂಚಿಸಿದ್ದಾರೆ.
ಭೂಸ್ವಾಧೀನಾಧಿಕಾರಿ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇದೆ. ಇದನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಾಂತ್ರಿಕ ವಿಷಯಗಳ ನೆಪವೊಡ್ಡಿ ರೈತರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ರೇಗಿದರು.
ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್‌, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮೀನ್‌ಬಾವಿ, ನಿಗಮದ ಮುಖ್ಯ ಆಡಳಿತಾಧಿಕಾರಿ ಔದರಂ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಬಿ.ಎ.ನಾಗರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.