ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜ.20 ಸೋಮವಾರ ರಂದು ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ರಾಮನಗೌಡ ಹಟ್ಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಅಪರಾಧ), ಸುನೀಲ್ ಕಾಂಬಳೆ, ಡಿಎಸ್‌ಪಿ ಸಿ.ಇ.ಎನ್ ಪೊಲೀಸ್ ಠಾಣೆ ಹಾಗೂ ನರೇಂದ್ರ ಬಾಬು, ಲೀಡ್ ಬ್ಯಾಂಕ್ ಮ್ಯಾನೇಜರ್ ವಿಜಯಪುರ ಇವರ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಬ್ಯಾಂಕ್‌ಗಳಲ್ಲಿ ಭದ್ರತೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಾಗಾರದಲ್ಲಿ ಬ್ಯಾಂಕ್‌ಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು, ಎ.ಟಿ.ಎಮ್ ಗಳಿಗೆ ಭದ್ರತೆ, ಬ್ಯಾಂಕ್ ಗ್ರಾಹಕರಿಗೆ ಜಾಗೃತಿ ಮೂಡಿಸುವುದು ಸೇರಿದಂತೆ ಇನ್ನಿತರ ಸೂಚನೆಗಳನ್ನು ನೀಡಲಾಯಿತು.

