ಉದಯರಶ್ಮಿ ದಿನಪತ್ರಿಕೆ
ಚಡಚಣ: ಸಮೀಪದ ನಿವರಗಿ ಗ್ರಾಮದ ಸಂಗಮೇಶ್ವರಪ್ರೌಢ ಶಾಲೆಯ ವಿದ್ಯಾರ್ಥಿಗಳು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಶಾಲಾ ವಿದ್ಯಾರ್ಥಿಗಳಿಗಾಗಿ 2024ನೇ ಸಾಲಿನಲ್ಲಿ ಸ್ವಾತಂತ್ರ್ಯ ಚಳುವಳಿಗೆ ವಿಷಯಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ನಡೆಸಿದ ಮೂರನೇ ವರ್ಷದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸಂಗಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ರವಿಶಂಕರ ಪೋಲಾದಿ ಜಿಲ್ಲೆಗೆ ಪ್ರಥಮ, ಸಂಗಮೇಶ ವಿಠ್ಠಲ್ ತೇಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಇವರ ಸಾಧನೆಗೆ , ಶಾಲೆಯ ಆಡಳಿತ ಮಂಡಳಿ, ಮುಖ್ಯ ಗುರುಗಳು, ಸಿಬ್ಬಂದಿ ವರ್ಗ ಮತ್ತು ಊರಿನ ಗ್ರಾಮಸ್ಥರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

