ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ೨೦೨೩ರ ಜ.೧ ರಿಂದ ೨೦೨೫ ಫೆ.೮ರ ವರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಸೇನಾ ಸಿಬ್ಬಂದಿ ಮತ್ತು ಮಾಜಿ ಸೈನಿಕರ ಅವಲಂಬಿತ ಮಕ್ಕಳಿಗೆ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ದಾಖಲಾತಿಗಳನ್ನು ಭರ್ತಿ ಮಾಡಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. ೦೮೩೫೨-೨೫೦೯೧೩ಗೆ ಸಂಪರ್ಕಿಸಬಹದು ಎಂದು ಪ್ರಕಟಣೆ ತಿಳಿಸಿದೆ.