Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ಸಿದ್ಧರಾಮೇಶ್ವರರ ಕಾಯಕ ದಾಸೋಹ ಅಲ್ಲಮರ ಸ್ವರೂಪಿ
(ರಾಜ್ಯ ) ಜಿಲ್ಲೆ

ಶ್ರೀ ಸಿದ್ಧರಾಮೇಶ್ವರರ ಕಾಯಕ ದಾಸೋಹ ಅಲ್ಲಮರ ಸ್ವರೂಪಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಸವಾದಿ ಶರಣರು ತಮ್ಮ ಆಧ್ಯಾತ್ಮಿಕ ಲೋಕದಿಂದ ಹುಡುಕಿ ತೆಗೆದ ತತ್ವಗಳೇ ವಚನಗಳು. ಸತ್ಯ, ಶುದ್ಧ, ಕಾಯಕದಿಂದ ನೆಮ್ಮದಿ, ಸಂತೃಪ್ತಿ ನೀಡುವುದು ದಾಸೋಹ, ಸಮಾನತೆ, ಪರಿಶುದ್ಧತೆ ಎಲ್ಲವೂ ಇದೆ. ಅದರಲ್ಲಿ ಕಾಯಕ, ದಾಸೋಹ ಮಾದರಿಯಾಗಬೇಕೆಂದು ಸಾಹಿತಿ ಡಾ. ರೇಖಾ ಬ. ಪಾಟೀಲ ಹೇಳಿದರು.
ನಗರದ ವೀರಶೈವ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದವರು ಏರ್ಪಡಿಸಿದ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಶ್ರೀ ಸಿದ್ಧರಾಮೇಶ್ವರರ ಅನುಭಾವ ಕುರಿತು ಮಾತನಾಡುತ್ತ ಅನುಭಾವಿಗಳೆಂದರೆ ಕನಸು ಕಾಣುವ ಶಿಶುವಿನಂತೆ ಸತ್ಯ, ನೀತಿ, ಯೋಗವನ್ನು ಸಾಧಿಸುವುದು. ಅನುಭಾವ ಸಮುದ್ರದಂತೆ ಜನಹಿತಕ್ಕಾಗಿ ಸುಗ್ಗವ್ಯಯ ೫ ತಿಂಗಳ ಮಡಿಲಲ್ಲಿ ಜನಿಸಿದ ಸಿದ್ಧರಾಮೇಶ್ವರರು ಬಾಲ್ಯದಿಂದಲೂ ಶಿವಭಕ್ತನಾಗಿ ಪರಿಶುದ್ಧ ಮನಸ್ಸಿನಿಂದ ಶಿವನ ಆರಾಧನೆ ಮಾಡುತ್ತ ಧ್ಯಾನದಲ್ಲಿ ಲೀನನಾಗಿ ಶಿವನನ್ನು ಒಲಿಸಿಕೊಂಡವರು. ಜನಹಿತಕ್ಕಾಗಿ ಆತ್ಮಕಲ್ಯಾಣ, ಲೋಕಕಲ್ಯಾಣ ಮಾಡುತ್ತ ತಮ್ಮ ಪವಾಡಗಳಿಂದ ಜಗತ್ತನ್ನೇ ಗೆದ್ದವರು. ಸಮತಾವಾದ, ಹೃದಯವಂತಿಕೆ ಅವರಲ್ಲಿ ಇತ್ತು. ಶಿವನಸಂಕಲ್ಪವಿತ್ತು ಜನಕಲ್ಯಾಣಕ್ಕಾಗಿ ಶಿವಯೋಗಿ ಸಿದ್ಧರಾಮೇಶ್ವರರಾಗಿ ನಿಸ್ವಾರ್ಥ ಬದುಕನ್ನು ಬಾಳಿ ತತ್ವ ಆದರ್ಶಗಳಿಂದ ನುಡಿದಂತೆ ನಡೆದವರು. ಆಚಾರ-ವಿಚಾರ ಅನುಭವದ ತತ್ವಗಳನ್ನು ಕಾಯಕದ ಮೂಲಕ ಅಳವಡಿಸಿಕೊಂಡ ಸಿದ್ಧರಾಮೇಶ್ವರರು ೬೧ಸಾವಿರ ವಚನಗಳನ್ನು ರಚಿಸಿ ಇಂದು ಕೇವಲ ೧೬೦೦ ವಚನಗಳು ಮಾತ್ರ ಲಭ್ಯವಾಗಿವೆ. ಅವೆಲ್ಲವೂ ಸಮಾಜದ ಒಳತಿಗಾಗಿ ರಚಿಸಿದಂತಹವು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡಿ, ಶಿವಯೋಗಿ ಸಿದ್ಧರಾಮೇಶ್ವರಲ್ಲಿ ನಮಗೆ ಅತ್ಯಂತ ಪೂಜ್ಯ ಸ್ಥಾನವಿದೆ. ಭಕ್ತರು, ಭಕ್ತಿಯಿಂದ ತನು-ಮನ ಪೂಜ್ಯ ಭಾವದಿಂದ ಶ್ರದ್ಧೆಯಿಂದ ಸ್ಮರಣೆ ಮಾಡಬೇಕು. ಶಿವನ ಸ್ವರೂಪವೇ ಗುರು. ನಾವು ಲಿಂಗ ಪೂಜೆಯಮೂಲಕ ಶಿವನನ್ನು ಕಾಣಬಹುದು ಎಂದರು.
ಅತಿಥಿ ಶಿವಲೀಲಾ ಮಠಪತಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ತು ಬೆಂಗಳೂರು ಇವರು ಪ್ರತಿ ವರ್ಷ ಕೊಡಮಾಡುವ ಡಾ. ಎಚ್. ನರಸಿಂಹಯ್ಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಜಂಬುನಾಥ ಕಂಚ್ಯಾಣಿ ಅವರನ್ನು ಮಹಾಸಭಾ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಶರಣೆ ಅಕ್ಕಮಹಾದೇವಿ ಬುರ್ಲಿ, ಅಪ್ಪಾಸಾಹೇಬ ಕೋರಿ, ಸಹದೇವ ನಾಡಗೌಡರ, ಶಾರದಾ ಕೊಪ್ಪ (ಐಹೊಳ್ಳಿ) ಬ್ಯಾಕೋಡ ದಂಪತಿ, ಸೋಮಶೇಖರ ವಾಲಿ, ಎಂ.ಎಂ. ಅವರಾದಿ, ರಾಜೇಂದ್ರ ಕೌಜಲಗಿ, ಮಲ್ಲಿಕಾರ್ಜುನ ಅಮರಣ್ಣವರ, ಎಸ್.ಎಂ. ಶಿವಣಗಿ, ಬಿ.ಟಿ. ಈಶ್ವರಗೊಂಡ, ಕಾಶಿನಾಥ ಅಣೆಪ್ಪನವರ, ಜಗದೀಶ ಮೋಟಗಿ, ಶರಣಗೌಡ ಪಾಟೀಲ, ಗುರುಪಾದಪ್ಪ ಅಂಬಲಿ, ಕೆ.ಎಸ್. ಬಿರಾದಾರ, ಅಂಗಡಿ, ಆರ್.ಎಸ್. ಪಟ್ಟಣಶೆಟ್ಟಿ, ಶಿರಹಟ್ಟಿ, ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮ ಸಾಹಿತಿ ಸಂಗಮೇಶ ಬದಾಮಿ ನಿರೂಪಿಸಿದರು. ನಿರ್ದೇಶಕ ವಿಠ್ಠಲ ತೇಲಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.