Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 03,2026

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವುಮೆನ್ ಮೀಡಿಯಾ ಕ್ಲಬ್ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಲಿ
(ರಾಜ್ಯ ) ಜಿಲ್ಲೆ

ವುಮೆನ್ ಮೀಡಿಯಾ ಕ್ಲಬ್ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಕ್ಕಮಹಾದೇವಿ ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ “ವುಮೆನ್ ಮೀಡಿಯಾ ಕ್ಲಬ್” ಉದ್ಘಾಟಿಸಿದ ಸಂವಹನ ತಜ್ಞೆ ಗೀತಾ ನಾಗರಾಜು ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವುಮನ್ ಮೀಡಿಯಾ ಕ್ಲಬ್ ಕೇವಲ ವಿಭಾಗ ಮತ್ತು ವಿಶ್ವವಿದ್ಯಾನಿಲಯಕ್ಕೆ ಸೀಮಿತವಾಗಿರದೇ ಇದು ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು ಎಂದು ಕೆನಡಾದ ಟೊರೊಂಟೊನ ಸಂವಹನ ತಜ್ಞೆ ಗೀತಾ ನಾಗರಾಜು ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮಂಗಳವಾರ ಆಯೋಜಿಸಿದ್ದ “ವುಮೆನ್ ಮೀಡಿಯಾ ಕ್ಲಬ್” ಉದ್ಘಾಟಿಸಿ ಅವರು ಮಾತನಾಡಿದರು.
ವುಮನ್ ಮೀಡಿಯಾ ಕ್ಲಬ್ ಮಹಿಳೆಯರಿಗೆ ತಮ್ಮ ಸಾಮರ್ಥ್ಯವನ್ನು ಅರಿತು, ಸಮಾಜದಲ್ಲಿ ಸ್ವತಂತ್ರವಾಗಿ ಮತ್ತು ಯಶಸ್ವಿಯಾಗಿ ಬದುಕಲು ಸಹಾಯ ಮಾಡಬೇಕು. ತರಬೇತಿಗಳು, ಕಾರ್ಯಾಗಾರಗಳು ಮತ್ತು ಜಾಗೃತಿ ಕಾರ್ಯಕ್ರಮಗಳ ಮೂಲಕ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು. ಅವರು ಸ್ವಚ್ಛತೆ, ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ತಮ್ಮ ಕುಟುಂಬ ಹಾಗೂ ಸಮುದಾಯದಲ್ಲಿ ದಾರಿದೀಪವಾಗಿ ಕೆಲಸ ಮಾಡಲು ಪ್ರೇರಣೆ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಕೆನಡಾದ ಟೊರೊಂಟೊನ ಬಿ.ವಿ ನಾಗ್ ಕಮ್ಯುನಿಕೇಶನ್ಸ್ನ ಅಧ್ಯಕ್ಷ ಹಾಗೂ ಇಂಡಿಯಾ ಅಬ್ಸರ್ವರ್ ಪತ್ರಿಕೆಯ ಸಂಪಾದಕ ಬಿ.ವಿ ನಾಗರಾಜು ಮಾತನಾಡಿ, ವುಮನ್ ಮೀಡಿಯಾ ಕ್ಲಬ್ ಮಹಿಳೆಯರಿಗೆ ಮಾತ್ರವಲ್ಲ, ಮಕ್ಕಳಿಗೂ ಶಿಸ್ತಿನ ಹಾದಿಯಲ್ಲಿ ಪ್ರೇರಣೆ ನೀಡಲು ಕಾರ್ಯನಿರ್ವಹಿಸಬೇಕು. ದೌರ್ಜನ್ಯದ ಬಗ್ಗೆ ಅರಿವು ಮೂಡಿಸಲು, ಸ್ವಚ್ಛತಾ ಅಭಿಯಾನ, ಪರಿಸರ ಸಂರಕ್ಷಣೆಯ ಕಾರ್ಯಗಳು, ಹಾಗೂ ಶಿಷ್ಟಾಚಾರದ ಕುರಿತಾದ ಕಾರ್ಯಾಗಾರಗಳನ್ನು ಆಯೋಜಿಸಬೇಕು. ಇದರಿಂದ ಸಮಾಜದಲ್ಲಿ ಮಾನವೀಯತೆ ಮತ್ತು ಸಮಾನತೆಯನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಈ ಕಾರ್ಯಕ್ರಮಗಳು ಹೆಣ್ಣುಮಕ್ಕಳಿಗೆ ದಾರಿ ದೀಪವಾಗಿ, ತಮ್ಮ ಜೀವನವನ್ನು ಸದೃಢವಾಗಿ ರೂಪಿಸಲು ಸಹಾಯವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಭಾಗದ ವಿದ್ಯಾರ್ಥಿನಿಯರಾದ ವಿದ್ಯಾ ಮೇಗಾಡಿ ಪ್ರಾರ್ಥನಾ ಗೀತೆ ಹಾಡಿದರು. ಸುನಂದಾ ಪಟ್ಟಣಶೆಟ್ಟಿ ಸ್ವಾಗತಿಸಿದರು. ಜ್ಯೋತಿ ಎಸ್ ಅತಿಥಿಗಳನ್ನು ಪರಿಚಯಿಸಿದರು. ಶಿಲ್ಪಾ ಪವಾರ ನಿರೂಪಿಸಿದರು ಹಾಗೂ ರಾಜೇಶ್ವರಿ ಮಲಕ್ಕೂಡ ವಂದಿಸಿದರು.

“ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಆದರ್ಶ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ, ಆಧುನಿಕ ವಿಚಾರಧಾರೆಗಳನ್ನು ಅಳವಡಿಸಿಕೊಂಡು, ಅವರು ಮಾಡಿದ ಸಾಧನೆಯನ್ನು ಮೀರಿಸುವ ಪ್ರಯತ್ನ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿನಿಯು ತನ್ನ ಸುತ್ತಲಿನ ಪ್ರಪಂಚವನ್ನು ವಿಸ್ತೃತವಾಗಿ ಅರಿಯಲು ಯತ್ನಿಸಬೇಕು. ಕೇವಲ ಒಂದೇ ವಿಷಯಕ್ಕೆ ಸೀಮಿತವಾಗದೇ, ಬೇರೆ ಬೇರೆ ವಿಷಯಗಳಲ್ಲಿ ಜ್ಞಾನವನ್ನು ಸಂಪಾದಿಸುವುದು ಅತ್ಯಗತ್ಯವಾಗಿದೆ.”

– ಪ್ರೊ.ಓಂಕಾರ ಕಾಕಡೆ
ಮುಖ್ಯಸ್ಥರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 03,2026

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 03,2026
    In ದಿನಪತ್ರಿಕೆ
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.