ಮಾತಾಲಕ್ಷ್ಮಿ ಪಬ್ಲಿಕ್ ಶಾಲೆಯ ೮ನೆಯ ವರ್ಷದ ನಾಟ್ಯಕಲಾ ಉತ್ಸವದಲ್ಲಿ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣವು ಶಿಕ್ಷಣ ಕಾಶಿ ಎಂದೇ ಹೆಸರಾಗಿದೆ. ಅದನ್ನು ನಾವು ನೀವೆಲ್ಲರೂ ಕಾಪಾಡಿಕೊಂಡು ಹೋಗಬೇಕು ಎಂದು ಸಿಎಂ ಮನಗೂಳಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ಗೋಲಗೇರಿ ರಸ್ತೆಯಲ್ಲಿರುವ ಮಾತಾಲಕ್ಷಿö್ಮ ಪಬ್ಲಿಕ್ ಶಾಲೆಯ ೮ನೆಯ ವರ್ಷದ ನಾಟ್ಯಕಲಾ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ನೀಡುವುದು ಎಂದರೆ ಪಠ್ಯಪುಸ್ತಕದಲ್ಲಿನ ಅಂಶಗಳನ್ನು ಮಾತ್ರ ಮಕ್ಕಳಿಗೆ ಕಲಿಸುವುದಲ್ಲ. ಅದರ ಜೊತೆಗೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಅವಕಾಶ ನೀಡುವುದು ಮತ್ತು ಉತ್ತಮ ಚಾರಿತ್ರ್ಯವಂತರಾಗಲು ಬೇಕಾದ ಪರಿಸರ ನಿರ್ಮಾಣ ಮಾಡಬೇಕು ಎಂದರು.
ಈ ವೇಳೆ ಅಮೇರಿಕಾದ ಟೆಕ್ಸರ್ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕ ಭೀಮನಗೌಡ ಪಾಟೀಲ ಮಾತನಾಡಿ, ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಜಗೊಳ್ಳಬೇಕಾದರೆ ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಷಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸಂಜೀವ ದೇಶಪಾಂಡೆ ವಹಿಸಿದ್ದರು. ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ನೆರವೇರಿಸಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಉತ್ಸವದಲ್ಲಿ ಪ್ರಾಚಾರ್ಯ ಪ್ರಸನ್ ಕುಲಕರ್ಣಿ, ನಿರ್ದೇಶಕ ಪ್ರವೀಣ ಹಾಲಹಳ್ಳಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು, ಪಾಲಕರು ಹಾಗೂ ವಿದ್ಯಾರ್ಥಿಗಳಿದ್ದರು.