ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್ ವೃತ್ತದ ಕಾಮಗಾರಿಯ ಬಿಲ್ ಪಾವತಿ ಮಾಡುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ವೃತ್ತದಲ್ಲಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದರು.
ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಬಿಲ್ ಪಾವತಿ ಮಾಡಲು ಅಧಿಕಾರಿಗಳಿಗೆ ಸೂಚಿಸಿ ಧರಣಿ ನಿರತರಿಗೆ ಧರಣಿ ಹಿಂಪಡೆಯುವಂತೆ ಮನವೊಲಿಸಿದರು. ಶಾಸಕರ ಮಾತಿಗೆ ಬೆಲೆ ನೀಡಿದ ಧರಣಿ ನಿರತರು ತಮ್ಮ ಹೋರಾಟವನ್ನು ಹಿಂಪಡೆದರು.
ಈ ವೇಳೆ ಧರಣಿ ನಿರತರಾದ ಹರೀಶ ನಾಟೆಕಾರ, ಬಸವರಾಜ ಸಿದ್ದಾಪೂರ, ಪರಶುರಾಮ ಮುರಾಳ, ತಹಸೀಲ್ದಾರ ಬಲರಾಮ ಕಟ್ಟಿಮನಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜೀವ ತಿಪರೆಡ್ಡಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಸೇರಿದಂತೆ ಹಲವರು ಇದ್ದರು.

