Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು

ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ

ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂ ಮಾಲೀಕರಿಗೆ ಇನ್ನೂ ಮರೀಚಿಕೆಯಾದ ಭೂ ಪರಿಹಾರ ಧನ
(ರಾಜ್ಯ ) ಜಿಲ್ಲೆ

ಭೂ ಮಾಲೀಕರಿಗೆ ಇನ್ನೂ ಮರೀಚಿಕೆಯಾದ ಭೂ ಪರಿಹಾರ ಧನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭೂ ಪರಿಹಾರ ಬರದಿದ್ದರೂ ಕಾಮಗಾರಿ ಆರಂಭ | ಆತಂಕದಲ್ಲಿ ಭೂ ಮಾಲೀಕರು | ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ!

ಉದಯರಶ್ಮಿ ದಿನಪತ್ರಿಕೆ

ಇಂಡಿ: ಮಹಾರಾಷ್ಟ್ರ ಕರ್ನಾಟಕ ಸಂಪರ್ಕಿಸುವ ೫೪೮ (ಬಿ) ರಸ್ತೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದ್ದು, ಭೂ ಮಾಲೀಕರಿಗೆ ಇದುವರೆಗೂ ಭೂ ಪರಿಹಾರವೇ ಜಮಾ ಮಾಡಿಲ್ಲ. ಆದರೆ ಕಾಮಗಾರಿ ಪ್ರಾರಂಭವಾಗಿದ್ದು ನಮಗೆ ಪರಿಹಾರ ಬರುತ್ತದೋ ಇಲ್ಲವೋ ಎಂಬ ಬಗ್ಗೆ ಭೂ ಮಾಲೀಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.
ಈಗಾಗಲೇ ಮಹಾರಾಷ್ಟ್ರ ರಾಜ್ಯದ ಮುರಮ್ ಗ್ರಾಮದಿಂದ ಕರ್ನಾಟಕದ ವಿಜಯಪುರ ನಗರದವರೆಗೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಅಲ್ಲಲ್ಲಿ ರಸ್ತೆ ಬದಿಗಳಲ್ಲಿ ಜಿಸಿಬಿ ಹಿಟಾಚಿ ಯಂತ್ರಗಳ ಮುಖಾಂತರ ಮಣ್ಣು ತೆಗೆದು ಅದಕ್ಕೆ ಗರಸು ತುಂಬುವ ಪ್ರಕ್ರಿಯೆ ನಡೆದಿದೆ. ಇನ್ನೂ ಹಲವೆಡೆ ಗರಸು ಸಿಗದೇ, ಮಣ್ಣು, ಗುಂಡುಕಲ್ಲುಗಳನ್ನು ತುಂಬಲಾಗುತ್ತಿದೆ.
ಭೂ ಮಾಲೀಕರಿಗೆ ಪರಿಹಾರ ನೀಡದೆ ಕಾಮಗಾರಿ ಪ್ರಾರಂಭಿಸಬಾರದು ಎಂದು ಸುಪ್ರೀಂ ಕೋರ್ಟ್ ಒಂದು ಪ್ರಕರಣದಲ್ಲಿ ಆದೇಶ ನೀಡಿದೆ. ಆದರೂ ಸಹಿತ ಈ ರಸ್ತೆ ಹಿಡಿದ ಗುತ್ತಿಗೆದಾರ ಭೂ ಮಾಲೀಕರಿಗೆ ಪರಿಹಾರ ಜಮಾ ಆಗದಿದ್ದರೂ ಸಹಿತ ಕಾಮಗಾರಿ ಪ್ರಾರಂಭಿಸಿದ್ದಾರೆ. ಕಾಮಗಾರಿ ಸಹ ಕಳಪೆ ಮಟ್ಟದಿಂದ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಸಂಬಂಧಪಟ್ಟಇಲಾಖೆಯ ಅಧಿಕಾರಿಗಳು ಪ್ರತೀ ದಿನ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಬೇಕು. ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದರೆ ಅವರಿಗೆ ಉತ್ತಮ ರಸ್ತೆ ನಿರ್ಮಾಣ ಮಾಡುವಂತೆ ಸೂಚಿಸಬೇಕು. ಒಮ್ಮೆ ರಸ್ತೆ ನಿರ್ಮಾಣ ಮಾಡಿದರೆ ಕನಿಷ್ಠ ೫-೧೦ ವರ್ಷಗಳ ಅವಧಿಯವರೆಗಾದರೂ ರಸ್ತೆ ಕೆಡದ ರೀತಿಯಲ್ಲಿ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಈ ಭಾಗದ ಸಾರ್ವಜನಿಕ ಆಶಯವಾಗಿದ್ದು ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಬೇಕಿದೆ.

“ಭೂ ಮಾಲೀಕರಿಗೆ ಭೂ ಪರಿಹಾರ ನೀಡಿದ ಬಳಿಕವಷ್ಟೇ ಕಾಮಗಾರಿ ಪ್ರಾರಂಭಿಸಲು ಒಂದು ಕೇಸ್ನಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದರೂ ಸಹ ಈ ರಸ್ತೆ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರ ನಮಗೆ ಹಣ ಜಮಾ ಆಗಿಲ್ಲವಾದರೂ ಕಾಮಗಾರಿ ಪ್ರಾರಂಭಿಸಿದ್ದಾರೆ, ಕೂಡಲೇ ನಮಗೆ ಭೂ ಪರಿಹಾರ ನೀಡಬೇಕು.”

*- ಇಂಗಳಗಿ ಗ್ರಾಮದ ನೊಂದ ರೈತ

“ಈಗಾಗಲೇ ಪ್ರತಿಶತ ೮೦ರಷ್ಟು ಅವಾರ್ಡ್ ಆಗಿದೆ, ಪೂರ್ಣ ಪ್ರಮಾಣದಲ್ಲಿ ಅವಾರ್ಡ್ ಮಾಡಿದ ನಂತರ ಭೂಮಿ ಕಳೆದುಕೊಂಡವರ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ. ಸುಪ್ರೀಂ ಕೋರ್ಟ ಆದೇಶದ ಬಗ್ಗೆ ನನಗೆ ಮಾಹಿತಿ ಇಲ್ಲ.”

– ಅಬಿದ್ ಗದ್ಯಾಳ
ಕಂದಾಯ ಉಪ ವಿಭಾಗಾಧಿಕಾರಿಗಳು, ಇಂಡಿ ಉಪವಿಭಾಗ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು

ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ

ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜವಾಹರ ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್; ಬಿಎಲ್ಓಗಳಿಗೆ ಒತ್ತಡ ಹಾಕದಂತೆ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್‌ಗೆ ಸಹಾಯವಾಣಿ ಕೇಂದ್ರ
    In (ರಾಜ್ಯ ) ಜಿಲ್ಲೆ
  • ಜು.೧೨ರಂದು ಉಪ ನೋಂದಣಿ ಕಚೇರಿಗಳು ಕಾರ್ಯನಿರ್ವಹಣೆ
    In (ರಾಜ್ಯ ) ಜಿಲ್ಲೆ
  • ​ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಡಿಜಿಟಲೀಕರಣಕ್ಕೆ ವೇಗ ನೀಡಿ
    In (ರಾಜ್ಯ ) ಜಿಲ್ಲೆ
  • ಗವಿಸಿದ್ದೇಶ್ವರ ಸೌಹಾರ್ದ ಸಂಘಕ್ಕೆ ಗವಿಸಿದ್ದೇಶ್ವರ ಶ್ರೀ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.