ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಬಲೇಶ್ವರ ಹಾಗೂ ತಿಕೋಟಾ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್. ಎಂ. ರೇವಣ್ಣ ಆದೇಶ ಹೊರಡಿಸಿದ್ದಾರೆ.
ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್ ಗ್ರಾಮದ ಪ್ರಗತಿಪರ ರೈತ ಮಲ್ಲಪ್ಪ ಗೌಡಪ್ಪ ದಳವಾಯಿ ಮತ್ತು ತಿಕೋಟಾ ತಾಲೂಕಿನ ಬರಟಗಿ ಗ್ರಾಮದ ಪ್ರಗತಿಪರ ರೈತ ಹಾಗೂ ಯುವ ಉದ್ದಿಮೆದಾರ ಗುರುಪಾದಪ್ಪ ಸಿದ್ದನಗೌಡ ದಾಶ್ಯಾಳ ಅವರನ್ನು ಸಚಿವ ಎಂ. ಬಿ.ಪಾಟೀಲ ಅವರ ಶಿಫಾರಸ್ಸಿನ ಮೆರೆಗೆ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ನೂತನ ತಾಲೂಕಾ ಅಧ್ಯಕ್ಷರಿಗೆ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.