ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ದಿ.25 ಶನಿವಾರ ಪ್ರವಾಸ ಕೈಗೊಂಡು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಅಂದು ಮ.2ಗಂ. ಮಮದಾಪುರ ಎಂ.ಸಿ.ಆರ್.ಪಿ ಕೇಂದ್ರದಲ್ಲಿ ಸಿ.ಎಸ್.ಆರ್., ಶಾಸಕರ ಮತ್ತು ತಾ.ಪಂ ಅನುದಾನದಲ್ಲಿ ನಿರ್ಮಿಸಿದ ಮೂರು ಶಾಲಾ ಕೊಠಡಿಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಸಮಾಜಕಲ್ಯಾಣ ಇಲಾಖೆಯಿಂದ ರೂ.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ ಭವನ ಹಾಗೂ ಕೆ.ಬಿ.ಜೆ.ಎನ್.ಎಲ್ ಎಸ್.ಟಿ..ಪಿ ಅನುದಾನದಲ್ಲಿ ರೂ.25 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಖಾಜಾ ಬಾಪುಸಾಹೇಬ್ ಮಠ ಸಮುದಾಯಭವನ ಉದ್ಘಾಟಿಸಲಿದ್ದಾರೆ.
ನಂತರ ಮ.2.30ಗಂ. ಟೊಯೊಟಾ ಕಿರ್ಲೋಸ್ಕರ್ ಸಿ.ಎಸ್.ಆರ್. ಅನುದಾನದಲ್ಲಿ ಸರಕಾರಿ ಪದವಿ ಕಾಲೇಜು ಹಾಗೂ ಕಣಮುಚನಾಳ ಸರ್ಕಾರಿ ಪ್ರೌಢಶಾಲೆ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಸರಕಾರಿ ಪದವಿ ಕಾಲೇಜು ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.