ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕೆಲವು ದಿನಗಳ ಹಿಂದೆ ವಿಜಯಪುರ ನಗರದ ಹೊರವಲಯದಲ್ಲಿ ಇಟ್ಟಂಗಿ ಬಟ್ಟಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರನ್ನು ಅವರನ್ನು ಕೆಲಸಕ್ಕೆ ಕರೆದೊಯ್ದು. ಮಾಲಿಕ ಗ್ಯಾಂಗ್ ಕಟ್ಟಿಕೊಂಡು ಮನಬಂದಂತೆ ಥಳಿಸಿ ಮೃಗಿಯ ವರ್ತನೆ ಮೆರೆದಿರುವ ಘಟನೆ ಇಡೀ ಮಾನವ ಕುಲ ತಲೆತಗ್ಗಿಸುವ ವಿಷಯವಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಂವಿಧಾನ ಜಾರಿಯಾಗಿ ೭೫ರ ಸುವರ್ಣ ಮಹೋತ್ಸವ ಆಚರಿಸುವ ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದು ಅತ್ಯಂತ ಖೇದಕರ ಸಂಗತಿ. ದೌರ್ಜನ್ಯಕೋರರೆಲ್ಲರನ್ನೂ ಪೊಲೀಸ್ ಇಲಾಖೆ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ನೊಂದ ಕುಟುಂಬಗಳಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಅಲ್ಲದೇ ಸದರಿ ದೌರ್ಜನ್ಯದಲ್ಲಿ ನೊಂದವರಿಗೆ ತಲಾ ೧೦ಲಕ್ಷ ರೂ. ಪರಿಹಾರ ಘೋಷಿಸಬೇಕು. ಸದರಿ ಇಟ್ಟಂಗಿ ಬಟ್ಟಿಯ ಪರವಾನಿಗೆ ರದ್ದು ಪಡಿಸಬೇಕು. ಹಾಗೂ ಜಿಲ್ಲೆಯ ಎಲ್ಲ ಇಟ್ಟಂಗಿ ಬಟ್ಟಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ದಸಂಸ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಹಾಗೂ ಸಿಂದಗಿ ತಾಲೂಕ ಸಂಚಾಲಕ ಶರಣು ಚಲುವಾದಿ ಜಂಟಿಯಾಗಿ ನೀಡಿದ್ದಾರೆ.