ಉದಯರಶ್ಮಿ ದಿನಪತ್ರಿಕೆ
ಚಡಚಣ: ನೇತಾಜಿ ಎಂದು ಜನಪ್ರಿಯರಾಗಿ ಕರೆಯಲ್ಪಡುವ ಸುಭಾಷ್ ಚಂದ್ರ ಬೋಸ್ ಅವರು ಬ್ರಿಟೀಷ್ ಆಳ್ವಿಕೆಯಿಂದ ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟದಲ್ಲಿ ಅತ್ಯಂತ ಪ್ರಮುಖ ಮತ್ತು ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಎಂದು ಶಿಕ್ಷಕ ಬಸವರಾಜ ಕರಜಗಿ ಹೇಳಿದರು.
ಅವರು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-೨ ಮರಡಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನೇತಾಜಿ ಸುಭಾಷ್ ಚಂದ್ರ ಬೋಸರ ಜಯಂತಿ ಕುರಿತು ಮಾತನಾಡುತ್ತಿದ್ದರು.
ನೇತಾಜಿಯವರ ಅಚಲ ನಿರ್ಣಯ, ದೂರದೃಷ್ಟಿಯ ನಾಯಕತ್ವ ಮತ್ತು ಕ್ರಾಂತಿಕಾರಿ ವಿಚಾರಗಳು ಅವರನ್ನು ಧೈರ್ಯ ಮತ್ತು ದೇಶಪ್ರೇಮದ ಸಂಕೇತವನ್ನಾಗಿ ಮಾಡಿತು ಎಂದು ಹೇಳಿದರು.
ಶಿಕ್ಷಕ ಜಗದೀಶ ಚಲವಾದಿ ಮಾತನಾಡಿ ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತ ಮಹಾನ್ ವ್ಯಕ್ತಿಯಾಗಿದ್ದರು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಮಹಾಂತೇಶ ಉಮರಾಣಿ ಮಾತನಾಡಿ ಬೋಸರು ಆಗಾಗ ಹೇಳುತ್ತಿದ್ದರು ನೀವು ನಮಗೆ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತ್ತೇನೆ. ಸ್ವಾತಂತ್ರ್ಯವೆಂಬುದು ಯಾರೂ ಕೊಡುವಂಥ ಸರಕಲ್ಲ. ಅದು ನಾವು ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ಸಹಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

