ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಇತ್ತೀಚೆಗೆ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷರಾಗಿ ಶಿವನಗೌಡ ಬಿರಾದಾರ ಆಯ್ಕೆಯಾದ ಹಿನ್ನಲೆಯಲ್ಲಿ ಶುಕ್ರವಾರ ವಿಜಯಪುರ ನಗರದಲ್ಲಿ ಜವಳಿ ಹಾಗೂ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಸವೇಶ್ವರ ಕೋ ಅಪ್ರೇಟಿವ್ಹ ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ, ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಬಸವರಾಜ ಸೋಂಪುರ(ಮನಗೂಳಿ), ಶಂಕರಗೌಡ ಪಾಟೀಲ, ಬಸನಗೌಡ ಚಿಕ್ಕೊಂಡ, ಸಂಗನಗೌಡ ಚಿಕ್ಕೊಂಡ , ಶೇಖರಗೌಡ ಬಿರಾದಾರ, ಬಸನಗೌಡ ಪಾಟೀಲ ಇದ್ದರು.