ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ರೈತ ದೇಶದ ಬೆನ್ನೆಲುಬು ಅಂತೆಯೇ ಮತದಾರ ಪ್ರಜಾಪ್ರಭುತ್ವದ ಬೆನ್ನೆಲುಬು ಎಂದು ಸರಕಾರಿ ಪ್ರಥಮ ದರ್ಜೆ ವಸತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರವಿ ಕಟ್ಟಿಮನಿ ಹೇಳಿದರು.
ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರ ದಿನದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತದಾರ ತನ್ನ ಹಕ್ಕನ್ನು ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಮತದಾನದಿಂದ ವಂಚಿತರಾಗಬಾರದು. ಎನ್ನುತ್ತ ಮತದಾನದ ಮಹತ್ವ, ಮತದಾನದ ಇತಿಹಾಸ, ಚುನಾವಣಾ ಆಯೋಗದ ಕಾರ್ಯ, ಮತದಾರರ ಜವಾಬ್ದಾರಿ ಕುರಿತು ಸವಿಸ್ತಾರವಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಚಾರ್ಯ ಎಸ್.ಎಚ್.ಅಂಗಡಿ ಪ್ರಸ್ತಾವಿಕವಾಗಿ ಮಾತನಾಡಿದರು, ಉಪನ್ಯಾಸಕ ಎಸ್.ಕೆ.ಮಾಳಗೊಂಡ, ಎ.ಎ.ಗಂಗನಗೌಡರು, ಬಿ.ಎ.ಬಡಿಗೇರ್ ಸೇರಿದಂತೆ ಮತ್ತೀತರರು ಇದ್ದರು.