Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ.ಶ್ರೀರಾಮುಲುಗೆ ನಾನು ಆಹ್ವಾನ ನೀಡಿಲ್ಲ :ಡಿಸಿಎಂ
(ರಾಜ್ಯ ) ಜಿಲ್ಲೆ

ಬಿ.ಶ್ರೀರಾಮುಲುಗೆ ನಾನು ಆಹ್ವಾನ ನೀಡಿಲ್ಲ :ಡಿಸಿಎಂ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೆಡ್ಡಿ ಬಾಯಿ ಚಪಲಕ್ಕೆ ಮಾತು | ಪಕ್ಷ ಒಡೆಯಲು ಯತ್ನ | ನನ್ನ ಹೆಸರಿನ ದುರುಪಯೋಗ | ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದ ಬಳಿ ಮಾತನಾಡಿದ ಅವರು, ಆತ ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾನೆ. ಆತ ಆ ಪಕ್ಷದಲ್ಲಿಯೇ ಇರಲಿಲ್ಲ. ಈಗ ಆ ಪಕ್ಷಕ್ಕೆ ಕಾಲಿಟ್ಟು, ಆ ಮನೆಯನ್ನೇ ಒಡೆಯುವ ಪ್ರಯತ್ನ ಮಾಡುತ್ತಿದ್ದಾನೆ. ನಾನು ಆತನ ಹೆಸರು ಹೇಳಿ ಅವನನ್ನು ಏಕೆ ದೊಡ್ಡ ಮನುಷ್ಯನನ್ನಾಗಿ ಮಾಡಲಿ? ಆತ ನನ್ನ ಹೆಸರು ತೆಗೆದುಕೊಂಡರೆ ದೊಡ್ಡವನಾಗುತ್ತಾನೆಯೇ? ನಾನು ಸಂಪರ್ಕದಲ್ಲಿ ಇರುವುದನ್ನು ಆತ ನೋಡಿದ್ದಾನೆಯೇ? ಆತನೇ ಯಾರ ಜೊತೆ ಸಂಪರ್ಕದಲ್ಲಿ ಇದ್ದ ಎಂಬುದನ್ನು ಈಗ ಚರ್ಚೆ ಮಾಡುವುದು ಬೇಡ. ನಾನು ಯಾವುದನ್ನು ಬಹಿರಂಗಗೊಳಿಸಲು ಹೋಗುವುದಿಲ್ಲ ಎಂದು ಕಿಡಿಕಾರಿದರು.
ಈ ಹಿಂದೆ ಚುನಾವಣೆಗೆ ಮುಂಚಿತವಾಗಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದು ನಿಜ. ಆಗ ಅವರು ಬರುವುದಿಲ್ಲ, ಬಿಜೆಪಿಯಲ್ಲಿಯೇ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು. ನಾನು ಆ ರೀತಿ ಸುಮಾರು 50 ಜನಕ್ಕೆ ಕೇಳಿದ್ದೇನೆ ಎಂದು ಹೇಳಿದರು.
ಶ್ರೀರಾಮುಲು ಅವರು ಈಗ ಕಾಂಗ್ರೆಸ್ ಪಕ್ಷಕ್ಕೆ ಬರಲು ಒಪ್ಪಿದರೆ ಎಂದು ಪ್ರಶ್ನಿಸಿದಾಗ, ಇದರ ಬಗ್ಗೆ ನಾನೇಕೆ ಸುಮ್ಮನೆ ಯೋಚನೆ ಮಾಡಲಿ ಎಂದರು.
ಕೆಲವು ಸಚಿವರು ಶ್ರೀರಾಮುಲು ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ನನ್ನ ಮುಂದೆ ಈ ವಿಚಾರ ಪ್ರಸ್ತಾಪವಾಗಲಿ, ಆಗ ಚರ್ಚೆ ಮಾಡೋಣ” ಎಂದು ಹೇಳಿದರು.

ಮೈಕ್ರೋ ಫೈನಾನ್ಸ್ ಹಾವಳಿ

ಮೈಕ್ರೋ ಫೈನಾನ್ಸ್ ಹಾವಳಿಗಳ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್, ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು, ಕಂದಾಯ, ಗೃಹ, ಕಾನೂನು ಸಚಿವರು ಸೇರಿ ಚರ್ಚೆ ಮಾಡುತ್ತಿದ್ದಾರೆ. ಈ ವಿಚಾರದ ಬಗ್ಗೆ ನಾನು ಹಿಂದೆ ಅಧ್ಯಯನ ಮಾಡಿದ್ದೆ. ಕಾನೂನಾತ್ಮಕವಾಗಿ ಯಾವ ಕ್ರಮ ತೆಗೆದುಕೊಳ್ಳಬಹುದು ಎಂದು ನಾವು ಚರ್ಚೆ ಮಾಡುತ್ತೇವೆ. ಸದ್ಯದಲ್ಲಿಯೇ ಸರ್ಕಾರದ ನಿರ್ಧಾರ ತಿಳಿಸಲಾಗುವುದು. ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು.

2026 ಕ್ಕೆ ಫ್ರಾನ್ಸ್ ವೀಸಾ ಬೆಂಗಳೂರಿನಲ್ಲಿ ಲಭ್ಯ

ಫ್ರಾನ್ಸ್ ದೇಶದ ಕಾನ್ಸುಲೇಟ್ ಕಚೇರಿಯ ಅಧಿಕಾರಿಗಳು ನನ್ನ ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದರು. ಕರ್ನಾಟಕದಿಂದ ಉತ್ತಮ ಹೂಡಿಕೆದಾರರು ಬರುತ್ತಿದ್ದಾರೆ. ನಮ್ಮ ಹೂಡಿಕೆದಾರರು ಸಹ ಸಂತಸಗೊಂಡಿದ್ದಾರೆ. 2026 ರ ವೇಳೆಗೆ ಬೆಂಗಳೂರಿನಲ್ಲಿ ಫ್ರಾನ್ಸ್ ದೇಶಕ್ಕೆ ವೀಸಾ ನೀಡುವ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದಿಂದಲೂ ಸಹಕಾರ ನೀಡುವುದಾಗಿ ತಿಳಿಸಿದ್ದೇವೆ. ಯಾವುದೇ ವಿಚಾರಕ್ಕೂ ಹಿಂಜರಿಕೆ ಮಾಡಿಕೊಳ್ಳಬೇಡಿ. ಕರ್ನಾಟಕದಲ್ಲಿ ಪ್ರಗತಿಪರವಾದ ಸರ್ಕಾರವಿದೆ. ನಿಮ್ಮ ಜೊತೆ ನಿಲ್ಲುತ್ತದೆ ಎಂದು ತಿಳಿಸಿದ್ದೇವೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

ಶ್ರೀರಾಮುಲು ಕಾಂಗ್ರೆಸ್​ಗೆ ಬಂದರೆ ಸ್ವಾಗತ: ಸಚಿವ ರಾಜಣ್ಣ

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಶ್ರೀರಾಮುಲು ನಮ್ಮ ಸಮುದಾಯದ (ಎಸ್‌ಟಿ ನಾಯಕ) ಪ್ರಬಲ ನಾಯಕ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಭಾವಿ ನಾಯಕ. ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಎಂದು ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011 ರಲ್ಲಿ ತಮ್ಮದೇ ಪಕ್ಷವನ್ನು (ಬಿಎಸ್ಆರ್ ಕಾಂಗ್ರೆಸ್) ಎದುರು ಹಾಕಿಕೊಳ್ಳುವ ಮೂಲಕ, 2013 ರ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು 4 ಸ್ಥಾನಗಳಲ್ಲಿ ಗೆದ್ದಿದ್ದರು. ಅವರು ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಕಾಂಗ್ರೆಸ್ ಸೇರಲು ಬಯಸಿದರೆ ನಾನು ಅವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಮಾಜಿ ಶಾಸಕ ಸೋಮನಗೌಡ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.