Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾದ ಕಾರ್ಮಿಕರಿಗೆ ಉದ್ಯೋಗ ಕೊಡಿಸುವೆ
(ರಾಜ್ಯ ) ಜಿಲ್ಲೆ

ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾದ ಕಾರ್ಮಿಕರಿಗೆ ಉದ್ಯೋಗ ಕೊಡಿಸುವೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾಸ್ಪತ್ರೆಗೆ ತೆರಳಿ ಗಾಯಾಳು ಕಾರ್ಮಿಕರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಇನ್ನು ಮುಂದೆ ಬೇರೆ ಕಡೆ ಕೆಲಸಕ್ಕೆ ಹೋಗಬೇಕಿಲ್ಲ. ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ಸಕ್ಕರೆ ಕಾರ್ಖಾನೆ ಅಥವಾ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಯ ನೀಡಿದ್ದಾರೆ.
ಶನಿವಾರ ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳಿ ಗಾಯಾಳು ಕಾರ್ಮಿಕರನ್ನು ಭೇಟಿ ಮಾಡಿದ ಸಚಿವರು ಸಾಂತ್ವನ ಹೇಳಿ ವೈಯಕ್ತಿಕವಾಗಿ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿದರು. ಅಲ್ಲದೇ, ನೀವು ಇನ್ನು ಮುಂದೆ ಜಮಖಂಡಿ ತಾಲೂಕಿನಲ್ಲಿಯೇ ಕೆಲಸ ಮಾಡಲು ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಕಾರ್ಮಿಕರಿಂದ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅವರಿಗೆ ಆತ್ಮಸ್ಥ್ಮೈರ್ಯ ತುಂಬಿದರು. ನಿಮಗೆ ಸರಕಾರದಿಂದ ಸಕಲ ನೆರವು ಒದಗಿಸಲು ಕ್ರಮ ಕೈಗೊಳ್ಳುತ್ತೇನೆ. ಸರಕಾರ ನಿಮ್ಮೊಂದಿಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ತಪ್ಪಿತಸ್ಥರಿಗೆ ಬುದ್ದಿ ಕಲಿಸಲು ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ಘಟನೆಯ ಆಘಾತದಿಂದ ಹೊರ ಬರಬೇಕು. ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ಹೇಳಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಆರೊಪಿಗಳು ಹೇಯ ಕೃತ್ಯ ಮಾಡುವ ಮೂಲಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ಬೆಳಕಿಗೆ ಬಂದಾಗ ನಾನು ಬೆಂಗಳೂರಿನಲ್ಲಿ ಸಭೆಯಲ್ಲಿದ್ದೆ. ವಿಜಯಪುರ ಜಿಲ್ಲಾಧಿಕಾರಿಗಳು ಸಭೆಯಲ್ಲಿದ್ದರು. ತಕ್ಷಣ ವಿಜಯಪುರ ಎಸ್ಪಿಯವರೊಂದಿಗೆ ಮಾತನಾಡಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಸೂಚನೆ ನೀಡಿದ್ದೇನೆ. ಘಟನೆಯ ಬಳಿಕ ಭಯ ಮತ್ತು ಆಘಾತದಲ್ಲಿದ್ದ ಕಾರ್ಮಿಕರು ತಕ್ಷಣ ದೂರು ನೀಡಿಲ್ಲ. ಹೀಗಾಗಿ ಘಟನೆ ಗಮನಕ್ಕೆ ಬಂದ ನಂತರ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮೊದಲು ಈ ಕಾರ್ಮಿಕರನ್ನು ಘಟನೆಯ ಆಘಾತದಿಂದ ಹೊರತರಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಜಿ. ಪಂ. ಸಿಇಓ ರಿಷಿ ಆನಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಡಾ. ಮಹಾಂತೇಶ ಬಿರಾದಾರ, ವಿಜಯಪುರ ಗ್ರಾಮೀಣ ಸಿಪಿಐ ರಾಯಗೊಂಡ ಜಾನರ, ಮುಖಂಡರಾದ ಅಡಿವೆಪ್ಪ ಸಾಲಗಲ, ಷಹಜಹಾನ್ ಮುಲ್ಲಾ, ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.