ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ೨೦೨೪-೨೫ನೇ ಕ್ರಿಕೆಟ್ ಕ್ರೀಡಾಪಟುಗಳು ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯದ ಕ್ರೀಡೆಗೆ ಆಯ್ಕೆಯಾಗಿದ್ದು, ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಕೆಟ್ ಕ್ರೀಡೆಯು ಇದೇ ದಿ. ೨೩-೦೧-೨೦೨೫ ರಿಂದ ೨೮-೦೧-೨೦೨೫ರ ರವರೆಗೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಜರುಗಲಿದೆ. ಸದರಿ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ತಂಡದ ತರಬೇತಿದಾರಾಗಿ ಕವಿತಾ ರಾಠೋಡ ಮತ್ತು ವ್ಯವಸ್ಥಾಪಕರಾಗಿ ಜಬಿನತಾಜ ಜಿಗಳೂರ ಭಾಗವಹಿಸಲಿದ್ದಾರೆ.
ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ, ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಸಕ್ಪಾಲ್ ಹೂವಣ್ಣ ಮತ್ತು ಡಾ.ಕಿರಣ ಜಿ ಎನ್ ಶುಭ ಹಾರೈಸಿದ್ದಾರೆ.

