Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವ ಜನತೆ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕು
(ರಾಜ್ಯ ) ಜಿಲ್ಲೆ

ಯುವ ಜನತೆ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರಧಾನ ಸತ್ರ ನ್ಯಾಯಾಧೀಶ ಶಿವಾಜಿ ನಲವಡೆ ಸಲಹೆ

ಉದಯರಶ್ಮಿ ದಿನಪತ್ರಿಕೆ‌

ವಿಜಯಪುರ: ಪ್ರಥಮ ಬಾರಿಗೆ ಮತದಾನ ಮಾಡುವ ಯುವ ಜನತೆ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕು ಎಂದು ಪ್ರಧಾನ ಸತ್ರ ನ್ಯಾಯಾಧೀಶ ಶಿವಾಜಿ ನಲವಡೆ ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಶನಿವಾರ ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಅವರು ರಾಜಕೀಯ ವ್ಯವಸ್ಥೆ ಕೆಟ್ಟಿದೆ ಎಂದು ದುರುತ್ತಾ ಕೂಡುವ ಬದಲು ಯೋಗ್ಯರನ್ನು ಆಯ್ಕೆ ಮಾಡುವ ಕಾರ್ಯ ಯುವ ಮತದಾನರಿಂದ ನಡೆಯಬೇಕು ಎಂದು ಅವರು ಯುವ ಜನತೆಗೆ ಕರೆಕೊಟ್ಟರು. ಚುನಾವಣೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಮತದಾನರು ಭಾಗಿಯಾಗುವುದರಿಂದ ಜನಪರ ಸರ್ಕಾರ ಆಡಳಿತಕ್ಕೆ ಬರಲು ಸಾಧ್ಯ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಮುಂದೆ ನಡೆಯಲಿರುವ ಎಲ್ಲಾ ಚುನಾವಣೆಗಳಲ್ಲಿಯೂ ಉತ್ತಮವಾದಂತಹ ಮತದಾನದ ಪ್ರಮಾಣ ಹೆಚ್ಚಿಸುವ ಕಾರ್ಯಕ್ಕೆ ಎಲ್ಲರೂ ಪ್ರಯತ್ನಿಸೋಣ ಎಲ್ಲಾ ಚುನಾವಣೆಗಳಲ್ಲಿಯೂ ಉತ್ತಮ ಪ್ರಮಾಣದ ಮತದಾನ ನಡೆಯುವ ಹಾಗೇ ಶ್ರಮಿಸೋಣ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಆರ್.ಸಿ. ಹಿರೇಮಠ ಮಾತನಾಡಿ, ಒಂದೇ ಒಂದು ಮತ ಇಡೀ ಚುನಾವಣೆಯ ಫಲಿತಾಂಶವನ್ನೇ ಬದಲಾವಣೆ ಮಾಡಿದ ಅನೇಕ ಉದಾಹರಣೆಗಳಿವೆ. ಹಾಗಾಗಿ ಎಲ್ಲರೂ ಮತದಾನ ಪ್ರಕ್ರಿಯೆ ಯಲ್ಲಿ ಭಾಗಿಯಾಗಬೇಕೆಂದು ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ; ಮತದಾನ ಪ್ರಮಾಣ ಹೆಚ್ಚಲು ಕಾರಣವಾದ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಬಂಧ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಬಹುಮಾನ ವಿತರಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಅರವಿಂದ ಹಂಗರಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ, ಸೈನಿಕ ಶಾಲೆಯ ಪ್ರಾಂಶುಪಾಲರಾದ ಪ್ರತಿಭಾ ಭೀಷ್ಟ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತ ವಿವಿಧ ಶಾಖೆಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

“ಚುನಾವಣಾ ಆಯೋಗ ಕಳೆದ ೧೫ ವರ್ಷಗಳಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನಾಗಿ ಪ್ರತಿ ಜನವರಿ ೨೫ ನ್ನು ಆಚರಿಸುತ್ತ ಬಂದಿದ್ದು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳು ಅದರಲ್ಲಿಯೂ ಬೂತ್ ಮಟ್ಟದ ಅಧಿಕಾರಿಗಳು, ಮಾಸ್ಟರ್ ಟ್ರೈನರ್ಗಳು, ಸ್ವೀಪ್ ಚಟುವಟಿಕೆಗಳಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳಿಗೆ ನಮ್ಮ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಲು ಕಾರಣವಾದ ಕಾರಣ ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ.”

– ಟಿ. ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.