ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸರಕಾರದ ಅನೇಕ ಯೋಜನೆಗಳು ಕಂದಾಯ ಇಲಾಖೆ ಜನ ಸಾಮಾನ್ಯರ ಮನೆ ಬಾಗಿಲಿಗೆ ಮುಟ್ಟಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನೆರವೇರಿಸುತ್ತಿದ್ದೇವೆ ಎಂದು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಮ್ಮಿಕೊಂಡ ೭೬ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಭಾರತ ದೇಶ ಸಂವಿಧಾನವನ್ನು ಅಧೀಕೃತವಾಗಿ ಅಂಗೀಕರಿಸಿದ ದಿನವನ್ನು ನಾವೆಲ್ಲ ಅತ್ಯಂತ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನು ಆಚರಣೆ ಮಾಡುತ್ತಿದ್ದೇವೆ. ಸರಕಾರ ರೈತರಿಗಾಗಿ ನೀಡುವ ಶೇ.೫೦ರಷ್ಟು ಸಬ್ಸಿಡಿಯಲ್ಲಿ ೫ಜನ ರೈತರಿಗೆ ಕಬ್ಬು ಕಟಾವು ಮಾಡುವ ಯಂತ್ರಗಳನ್ನು ರೂ.೧.೪೦ಕೋಟಿ ಅನುದಾನದಲ್ಲಿ ನೀಡಲಾಗಿದೆ. ಅಲ್ಲದೇ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ಇದರ ಸದುಪಯೋಗವನ್ನು ತಾಲೂಕಿನ ಜನತೆ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಉಪಾದ್ಯಕ್ಷ ರಾಜಣ್ಣಿ ನಾರಾಯಣಕರ ಮಾತನಾಡಿ, ಪಟ್ಟಣದ ಪುರಸಭೆ ಅತೀಕ್ರಮಣ ಜಾಗೆಯನ್ನು ತೆರೆವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದೆ ಎಂದರು.
ಈ ವೇಳೆ ಕವಾಯತನಲ್ಲಿ ನಗರದ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಕವಾಯತ್ ಜರುಗಿತು. ವಿವಿಧ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.
ವೇದಿಕೆ ಮೇಲೆ ಕೃಷಿ ಅಧಿಕಾರಿ ಡಾ.ಎಚ್.ವೈ.ಸಿಂಗೆಗೋಳ, ಸಮಾಜ ಕಲ್ಯಾಣಾಧಿಕಾರಿ ಭವಾನಿ ಪಾಟೀಲ, ಗ್ರೇಡ್-೨ ತಹಶೀಲ್ದಾರ ಇಂದ್ರಾಬಾಯಿ ಬಳಗಾನೂರ ಪಿಎಸ್‌ಐ ಆರೀಫ್ ಮುಷಾಪುರಿ, ಬಿಇಒ ಎಂ.ಬಿ.ಯಡ್ರಾಮಿ ಇದ್ದರು. ಈ ವೇಳೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಲರವ ಜರುಗಿತು. ಶಿಕ್ಷಕ ಎಂ.ಆರ್.ಡೋಣಿ ನಿರೂಪಿಸಿ ವಂದಿಸಿದರು.