ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ವತಿಯಿಂದ ೨೦೨೪-೨೫ನೇ ಸಾಲಿನ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಜನೀಯರ್ & ಟೆಕ್ನಾಲಜಿ ವಿಷಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಸಾಲಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನಿಸಾಗಿದೆ.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿ ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿರುವ ವಿದ್ಯಾರ್ಥಿಗಳು ಸಹ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳು ಜ.೩೧ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ಸಲ್ಲಿಸುವಾಗ ನಿಗಮದಿಂದ ಕಳೆದ ವರ್ಷ ಪಡೆದಿರುವ ಸಾಲದ ಮೊತ್ತದಲ್ಲಿ ಶೇ.೧೨ರಷ್ಟನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಹೆಚ್ಚನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಹಾಗೂ ದೂರವಾಣಿ ಸಂಖ್ಯೆ. ೦೮೩೫೨-೨೭೮೩೪೪ & ೮೨೭೭೯೪೪೨೦೯ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.