ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: “ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳ ಸಬಲೀಕರಣ ಬಹು ಮುಖ್ಯ” ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ತ ಗುಣಾರಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಸಮಗ್ರ ಪ್ರಯತ್ನಗಳು ನಡೆದಿವೆ. ಈ ನಿಟ್ಟಿನಲ್ಲಿ “ಪಿ.ಸಿ. & ಪಿ.ಎನ್.ಡಿ.ಟಿ ಕಾಯ್ದೆ ೧೯೯೪” ಅನುಷ್ಠಾನವು ಮುಖ್ಯ ಅಂಶವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಕೆ.ಡಿ. ಗುಂಡಬಾವಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ಮಲೇರಿಯ ನಿರ್ಮೂಲನಾ ಅಧಿಕಾರಿ ಡಾ.ಜಾನ್ ಕಟವಟೆ, ತಾಲೂಕು ಆರೋಗ್ಯಧಿಕಾರಿ ಡಾ. ಪರಸುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲಾಉರ, ಜಿಲ್ಲಾ ಪ್ಲೋರೋಸಿಸ್ ಸಂಯೋಜಕ ವಿಜಯ ಮಹಾಂತೇಸ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಹಾಗೂ ನಗರ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.