ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ ೧, ೨ಎ, ೩ಎ ಹಾಗೂ ೩ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಾಂಗ ವೇತನ ವೇತನ/ ಫೆಲೋಶಿಫ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದ ಶಾಸನ ಬದ್ದ ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ (೨೦೨೪ರ ಜ.೧೦ ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ) ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಫೆ.೧೦ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಹಾಗೂ ಸಹಾಯವಾಣಿ ಸಂಖ್ಯೆ. ೮೦೫೦೭೭೦೦೦೪ ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.