ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತರ ಪದವಿ ಹಾಗೂ ಪಿಎಚ್‌ಡಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ ೧, ೨ಎ, ೩ಎ ಹಾಗೂ ೩ಬಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದೂಳಿದ ಕಲ್ಯಾಣ ಇಲಾಖೆ ನೀಡುವ ಡಿ.ದೇವರಾಜ ಅರಸು ವ್ಯಾಸಾಂಗ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ https://bcwd.karnataka.gov.inನಲ್ಲಿ ಫೆ.೫ರ ವರೆಗೆ ಆನ್‌ಲೈನ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ. ೮೦೫೦೭೭೦೦೦೪ ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.