Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಪ್ರಶಸ್ತಿಗೆ ಗೌರವ ತಂದ ಡಾ.ವಿಜಯಲಕ್ಷ್ಮಿ ದೇಶಮಾನೆ ಸಾವಿಲ್ಲದ ಶರಣೆ
ವಿಶೇಷ ಲೇಖನ

ಪ್ರಶಸ್ತಿಗೆ ಗೌರವ ತಂದ ಡಾ.ವಿಜಯಲಕ್ಷ್ಮಿ ದೇಶಮಾನೆ ಸಾವಿಲ್ಲದ ಶರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಡಾ.ಶಶಿಕಾಂತ ಪಟ್ಟಣ
ರಾಮದುರ್ಗ

ಉದಯರಶ್ಮಿ ದಿನಪತ್ರಿಕೆ

ಭಾರತದಲ್ಲಿ ಇಂದು ಪ್ರಶಸ್ತಿಗಳು ತಮ್ಮ ಬೆಲೆ ಕಳೆದುಕೊಳ್ಳುವ ಸಂದರ್ಭದಲ್ಲಿ ಪ್ರಶಸ್ತಿಗೆ ಗೌರವ ತಂದು ಕೊಟ್ಟವರಲ್ಲಿ ಅಗ್ರರು ಕ್ಯಾನ್ಸರ್ ತಜ್ಞೆ ಬಡವರ ಬಂಧು ಡಾ ವಿಜಯಲಕ್ಷ್ಮಿ ದೇಶಮಾನೆ. ಬಡತನ ಹಸಿವು ಸಂಘರ್ಷಗಳ ಮಧ್ಯೆ ತಮ್ಮ ಗುರಿ ಸಾಧಿಸಿದ ತಪಸ್ವಿ ಪದ್ಮಶ್ರೀ ಪುರಸ್ಕೃತರು..
ಕಪ್ಪು ಬಣ್ಣ ಕಾಟನ್ ಸೀರೆ, ಸದಾ ಹೆಗಲು ಮುಚ್ಚುವ ಸೆರಗು, ಹಣೆಯಲ್ಲಿ ಕುಂಕುಮ, ಮುಖದಲ್ಲೊಂದು ಮಾಸದ ನಗು. ಸರಳ ಸದಾ ವ್ಯಕ್ತಿತ್ವದ ಹೆಣ್ಣು ಮಗಳು. ಹಮ್ಮು, ಬಿಮ್ಮು‌ ಬಿಡಿ, ಗಟ್ಟಿಯಾಗಿ ‌ಮಾತನಾಡಿದ್ದು ಕೇಳದವರಿಲ್ಲ. ಸಣ್ಣ ಮನೆಯೊಂದರಲ್ಲಿ ಸರಳ ಜೀವನ. ಅಧ್ಯಾತ್ಮವಾದಿ ದೇವರ ಪರಮಭಕ್ತೆ.
ಕೈಯಲ್ಲಿ ಸ್ಟೆತಾಸ್ಕೋಪ್ ಹಿಡಿದು ಆಕೆ ನಡೆದು ಬರುತ್ತಿದ್ದರೆ,‌ ಜೀವನ್ಮರಣದ ನಡುವೆ ಹೋರಾಡುತ್ತಿರುವ ರೋಗಿಗಳ ಕಣ್ಣಲ್ಲಿ ಭರವಸೆಯ ಬೆಳಕು. ಕ್ಯಾನ್ಸರ್ ‌ರೋಗಿಗಳ ಪಾಲಿನ ಆಶಾಕಿರಣವೇ ಡಾ. ವಿಜಯಲಕ್ಷ್ಮಿ ‌ದೇಶಮಾನೆ.
ಕಲಬುರಗಿ ಮೂಲದ ಹೆಸರಾಂತ ಕ್ಯಾನ್ಸರ್‌ ತಜ್ಞೆ ಡಾ. ವಿಜಯಲಕ್ಷ್ಮೀ ದೇಶಮಾನೆ ಅವರಿಗೆ ಪದ್ಮಶ್ರೀ ಪುರಸ್ಕಾರ ಒಲಿದು ಬಂದಿದೆ. ತರಕಾರಿ ಮಾರಾಟ ಮಾಡುವ ಕುಟುಂಬದಿಂದ ಕ್ಯಾನ್ಸರ್‌ ಸರ್ಜನ್‌ , ಪದ್ಮಶ್ರೀ ಪುರಸ್ಕಾರವರೆಗೆ ವಿಜಯಲಕ್ಷ್ಮೀ ಸಾಗಿದ ದಾರಿಯುದ್ದಕ್ಕೂ ಬರೀ‌ ಕಷ್ಟಗಳ ಸರಮಾಲೆ ಹೊತ್ತೆ ಸಾಧಿಸಿದವರು.
ಕ್ಯಾನ್ಸರ್‌ ರೋಗಿಗಳ ಪಾಲಿನ ಧನ್ವಂತರಿ ಎಂದೇ ಖ್ಯಾತಿ ಗಳಿಸಿದ್ದರು. ಅದಕ್ಕೆ ಕಾರಣ ಅವರ ಶ್ರದ್ಧೆ, ಶ್ರಮ, ತ್ಯಾಗ, ಮಾನವೀಯ ಕಳಕಳಿ, ವೈದ್ಯ ವೃತ್ತಿಯನ್ನೇ ಉಸಿರಾಗಿಸಿಕೊಂಡು ಬದುಕಿದ ಅಪರೂಪದ ವೈದ್ಯೆ. ಎಂ ಬಿ ಬಿ ಎಸ್, ಎಂ ಎಸ್ (ಜನರಲ್ ಸರ್ಜರಿ) ಎಫ.ಎ. ಐ. ಎಸ್‌. ಪದವಿ ಪಡೆದು ಕಿದ್ವಾಯಿ ಮೆಮೋರಿಯಲ್ ಇನ್ಸಿಟ್ಯೂಟ್ ಆಫ್‌ ಎನ್ನಾಲಜಿಯಲ್ಲಿ ಸರ್ಜರಿಯ ಪ್ರಾಧ್ಯಾಪಕರಾಗಿದ್ದ ಅವರು ‌ಕಿದ್ವಾಯಿ‌‌ ನಿರ್ದೇಶಕಿಯಾಗಿಯೂ ಕೆಲಸ ನಿರ್ವಹಿಸಿದ್ದರು.


ಕಲಬುರಗಿಯ ಕೊಳಗೇರಿ ಪ್ರದೇಶದಲ್ಲಿ ವಾಸವಾಗಿದ್ದರು ವಿಜಯಲಕ್ಷ್ಮಿ ‌ಹೆತ್ತವರು. ತಂದೆ ಬಾಬುರಾವ್ ಕಟ್ಟಿಗೆ ಕಡಿಯುವುದು, ಕೂಲಿ ಮಾಡುತ್ತಾ ಮಿಲ್ ಒಂದರಲ್ಲಿ ಕಾರ್ಮಿಕನಾಗಿ ಸೇರಿದರು. ತಾಯಿ ರತ್ನಮ್ಮ ತರಕಾರಿ ಮಾರಾಟದಿಂದ ಕುಟುಂಬಕ್ಕೆ ನೆರವಾಗಿದ್ದರು.. ಬಾಬುರಾವ್- ರತ್ನಮ್ಮ ದಂಪತಿಗೆ ವಿಜಯಲಕ್ಷ್ಮಿಸೇರಿದಂತೆ ಏಳು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ. ದಿನದ ದುಡಿಮೆಯನ್ನೇ ನೆಚ್ಚಿಕೊಂಡು ಬದುಕುತ್ತಿದ್ದ ಕುಟುಂಬದಲ್ಲಿ ವಿಜಯಲಕ್ಷ್ಮಿ ಅವರು ವೈದ್ಯೆಯಾಗಿ ಬಡವರಿಗೆ ಒಳ್ಳೆಯ ಸೇವೆ ಒದಗಿಸಬೇಕು ಎಂಬುದು ಹೆತ್ತವರ ಕನಸು.
ಕಲಬುರಗಿಯ ಚಕ್ರಕಟ್ಟಾ ಮಾರುತಿ ಮಂದಿರದ ಬಳಿ ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದ ತಾಯಿಯೊದಿಗೆ ತರಕಾರಿ ಮಾರುತ್ತಲೇ ಹೈಸ್ಕೂಲ್‌ ಶಿಕ್ಷಣ ಕನ್ನಡ ಪೂರೈಸಿದ ವಿಜಯಲಕ್ಷ್ಮೀ ನಂತರ ಹುಬ್ಬಳ್ಳಿಯಿಂದ ವೈದ್ಯಕೀಯ ಪದವಿ ಪಡೆದರು. ಮಗಳು ವೈದ್ಯಳಾಗಬೇಕೆಂಬ ಆಸೆಗೆ ತಾಯಿ ರತ್ನಮ್ಮ ತಮ್ಮ ಮಂಗಳಸೂತ್ರ ಮಾರಿ ಅದರಿಂದ ಬಂದ ಹಣದಿಂದಲೇ ವಿಜಯಲಕ್ಷ್ಮೀಯವರ ವೈದ್ಯಕೀಯ ಶಿಕ್ಷಣದ ಶುಲ್ಕ ಭರಿಸಿದ್ದರು. ತರಕಾರಿ ಮಾರುತ್ತಲೇ ಓದುತ್ತಾ, ಡಾಕ್ಟರ್ ಪದವಿ ಪಡೆದ ಬಂದ ಡಾ. ವಿಜಯಲಕ್ಷ್ಮೀ ದೇಶಮಾನ್ಯೆ ಕ್ಯಾನ್ಸರ್‌ ಸರ್ಜನ್‌ ಆಗಿ ಮಾಡಿರುವ ಸಾಧನೆ, ಸಾಗಿದ ದಾರಿ, ಏರಿದ ಎತ್ತರ ಮಾದರಿ. ರೋಗಿಗಳ ಸೇವೆಯೇ ಪರಮ‌ ಧ್ಯೇಯವಾಗಿಸಿಕೊಂಡಿದ್ದ ಡಾ. ವಿಜಯಲಕ್ಷ್ಮಿ, ದಿನದ ಬಹುತೇಕ ‌ಸಮಯ ಆಸ್ಪತ್ರೆಯಲ್ಲೇ ಕಳೆಯುತ್ತಿದ್ದರು. ಸಮಯದ ಪರಿವೆಯೇ ಇಲ್ಲದೇ ಚಿಕಿತ್ಸೆ ನೀಡಬೇಕೆಂಬ ಉದ್ದೇಶಕ್ಕೆ ಡಾ.ವಿಜಯಲಕ್ಷ್ಮಿ ವಾಚ್ ಕಟ್ಟುತ್ತಲೇ ಇರಲಿಲ್ಲವಂತೆ. ಅವರು ಗಳಿಸಿದ ಪ್ರಶಸ್ತಿಗಳಿಗೆ ಲೆಕ್ಕವಿಲ್ಲ. ದೇಶ,ವಿದೇಶಗ ಳಲ್ಲೂ ಅವರ ಸಾಧನೆ ಗುರುತಾಗಿದೆ. ತಮ್ಮ ಬದುಕನ್ನೇ ವೈದ್ಯ ವೃತ್ತಿಗೆ ಸಮರ್ಪಿಸಿದ ಡಾ. ವಿಜಯಲಕ್ಷ್ಮಿ, ರಾತ್ರೋರಾತ್ರಿ ‌ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗುವ ವೈದ್ಯರಲ್ಲ ಬದಲಾಗಿ ತಮ್ಮ ಸೇವೆಯಿಂದಲೇ ಫೇಮಸ್ ಆದ ಡಾ.ವಿಜಯಲಕ್ಷ್ಮಿ.
ಲೇಟಾದರೂ ಪರವಾಗಿಲ್ಲ ಡಾ. ವಿಜಯಲಕ್ಷ್ಮಿ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಗೌರವ ಬಂದಂತಾಯ್ತು. ಬುದ್ಧ ಬಸವ ಬಾಪು ಅಂಬೇಡಕರ ಅವರ ಕನಸು ಸಾಕಾರಗೊಳಿಸಿದ
ಡಾ ವಿಜಯಲಕ್ಷ್ಮಿ ದೇಶಮಾನೆ ಸಾವಿಲ್ಲದ ಶರಣೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.