ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ ವತಿಯಿಂದ ಫೆ.೧ರಂದು ಮಡಿವಾಳ ಮಾಚಿದೇವ, ಫೆ.೫ ರಂದು ಸವಿತಾ ಮಹರ್ಷಿ ಜಯಂತಿ ಹಾಗೂ ಫೆ.೧೦ರಂದು ಕಾಯಕ ಶರಣರ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ, ಫೇಬ್ರವರಿ ೧ರಂದು ಮಡಿವಾಳ ಮಾಚಿದೇವ ಹಾಗೂ ಫೆಬ್ರವರಿ ೧೦ ರಂದು ಕಾಯಕರ ಶರಣರ ಜಯಂತಿ ಕಾರ್ಯಕ್ರಮಗಳನ್ನು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮವನ್ನು ನಗರದ ರಂಗಮಂದಿರ ದಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ ೧೦ ಘಂಟೆಗೆ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದವರೆಗೆ ಮೆರವಣಿಗೆ ಆಯೋಜನೆ ಮಾಡಲಾಗಿದೆ. ನಂತರ ವೇದಿಕೆ ಕಾರ್ಯಕ್ರಮ ಮಾಡುವ ಮೂಲಕ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ ಸಂಗೀತ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.
ಜಿಲ್ಲಾಡಳಿತದಿಂದ ಆಚರಿಸಲಾಗುವ ಈ ಎಲ್ಲ ಮಹನಿಯರ ಜಯಂತಿ ದಿನಗಳಂದು, ಜಯಂತಿ ಕಾರ್ಯಕ್ರಮ ಹಾಗೂ ಮೆರವಣಿಗೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆ, ಸಮರ್ಪಕ ವಿದ್ಯುತ್ ವ್ಯವಸ್ಥೆ, ವೇದಿಕೆ ಕಾರ್ಯಕ್ರಮದಲ್ಲಿ ಆಸನಗಳ ವ್ಯವಸ್ಥೆ, ಆಹ್ವಾನ ಪತ್ರಿಕೆ ಮುದ್ರಣ, ಶಿಷ್ಠಾಚಾರದಂತೆ ಜಯಂತಿಗಳಿಗೆ ಆಹ್ವಾನ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಫೆಬ್ರವರಿ ೫ರಂದು ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ಬೆಳಿಗ್ಗೆ ೧೦.೦೦ಕ್ಕೆ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು ಸಂಗೀತ, ಹಾಗೂ ಉಪನ್ಯಾಸ ಕಾರ್ಯಕ್ರಮ ಮೂಲಕ ಅತ್ಯಂತ ಸರಳ ಹಾಗೂ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ತಹಶೀಲ್ಧಾರ ಗ್ರೇಡ್-೨ ಐ.ಎಚ್ ತುಂಬಗಿ, ಸಮಾಜದ ಮುಖಂಡರಾದ ಸಾಯಬಣ್ಣ ಮಡಿವಾಳ, ಬಾಬು ಬಳ್ಳಾರಿ, ಅಡಿವೆಪ್ಪ ಸಾಲಗಲ್ಲ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ದೇವೇಂದ್ರ ಮೀರೇಕರ, ಗಿರೀಶ ಕುಲಕರ್ಣಿ, ಗುರುರಾಜ ಪಂಚಲಿಂಗ, ರಾಜಕುಮಾರ ಬಳ್ಳಾರಿ, ಸುರೇಶ ಗುರುಜಾಲ, ನೀಲೇಶ ಶಹಾಪುರ, ಮಂಜುನಾಥ ಗುರುಜಾಲ, ಕೆ.ಕೆ ಬನ್ನೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.