ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ “ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ” ಕಾರ್ಯಕ್ರಮದ ಅಂಗವಾಗಿ ಜ.೩೦ರ ಬೆಳಿಗ್ಗೆ ೯ಗಂಟೆಗೆ ಜನಜಾಗೃತಿ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ರ‍್ಯಾಲಿಯು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಬಂದು ಮುಕ್ತಾಯವಾಗಲಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.