ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯ ನಡೆಸುವ ಗಣಕಯಂತ್ರ ಪ್ರವೇಶ ಪರೀಕ್ಷೆಗಳು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ನೀಲಕಂಠೇಶ್ವರ ನಗರ ಹಾಗೂ ಅಲ್-ಅಮೀನ್ ಮೆಡಿಕಲ್ ಕಾಲೇಜ ಪರೀಕ್ಷಾ ಕೇಂದ್ರಗಳಲ್ಲಿ ಫೆ.೩ ರಿಂದ ಫೆ.೧೦ರ ವರೆಗೆ ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ದಿನದಂದು ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಹಾಗೂ ಅಭ್ಯರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟವಾಚ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್ ಮುಂತಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.