ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಿಸಿ ಟಿ.ಭೂಬಾಲನ್ ಸಲಹೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಸ್ತೆಗಳನ್ನು ದಾಟುವಾಗ, ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಸುರಕ್ಷತಾ ನಿಯಮ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಜಿಲ್ಲಾ ಸಂಚಾರಿ ಪೊಲೀಸ್ ಠಾಣೆ, ಹಾಗೂ ಭಾರತ ಸ್ಕೌಟ್ & ಗೈಡ್ಸ್ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚಿಗೆ ಗಾಂಧಿ ವೃತ್ತದ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ “ರಸ್ತೆ ಸುರಕ್ಷತಾ ಜಾಗೃತಿ ಆಂದೋಲನ” ಹಾಗೂ “ರಸ್ತೆ ಸಂಚಾರಿಕೆ ಸ್ವಯಂ ಸೇವಕರ ಬೆಂಬಲ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ೧೮ ವರ್ಷ ಒಳಗಿನ ಮಕ್ಕಳಿಗೆ ವಾಹನ ಚಾಲನೆ ಮಾಡದಂತೆ ಪಾಲಕರು ನಿಗಾ ವಹಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ರಾಹುಲ ಎಸ್ ಡೊಂಗರೆ ಪ್ರಾಸ್ತಾವಿಕವಾಗಿ ಮಾತನಾಡಿ, ನಗರದ ವಿವಿಧ ಜನನಿಬಿಡ ಪ್ರದೇಶಗಳಲ್ಲಿ ರಸ್ತೆ ಸುರಕ್ಷತಾ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಭಾರತ ಸ್ಕೌಟ್ & ಗೈಡ್ಸ್ ಜಿಲ್ಲಾ ಸಂಘಟಕರಾದ ರಾಜಶೇಖರ್ ಖೆಡಗಿ, ಎಎಸ್‌ಐಗಳಾದ ಎಸ್ ಆರ್ ಚವ್ಹಾಣ, ಎಸ್.ಎಸ್. ಕಟ್ಟಿಮಣಿ, ಪೊಲೀಸ್ ಕಾನ್ಸ್ಟೇಬಲ್ ಕೆ.ಎಸ್.ಗೋಟ್ಯಾಳ, ಎಸ್.ಜಿ.ಕುಂಬಾರ, ಎಸ್.ಎಂ.ದೋಣಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.