ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೊಲ್ಹಾರ ತಾಲೂಕಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿದರು.
ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಯು.ಕೆ.ಪಿ ಕ್ರಾಸದಿಂದ ೨.೫ ಕೀ.ಮಿ. ಸರ್ವಿಸ್ ರಸ್ತೆ ಕುರಿತು ಸ್ಥಳ ಪರಿಶೀಲಿಸಿ ಹೆದ್ದಾರಿಯಲ್ಲಿಯ ನ್ಯೂನ್ಯತೆ ಕುರಿತು ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕೊಲ್ಹಾರ ತಹಶೀಲ್ದಾರ ಕಾರ್ಯಾಲಯಕ್ಕೆ ಭೇಟಿ ನೀಡಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸ್ಥಳ ಹಾಗೂ ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ಹೊಸದಾಗಿ ಪ್ರಜಾ ಸೌಧ ನಿರ್ಮಿಸುವ ಕುರಿತು ಸ್ಥಳ ಪರಿಶೀಲನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹಾಗೂ ಪಟ್ಟಣದ ಸಾರ್ವಜನಿಕರೊಂದಿಗೆ ಚರ್ಚಿಸಿದರು.
ಪಟ್ಟಣದ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಬೇಟಿ ನೀಡಿ ಮಕ್ಕಳೂಂದಿಗೆ ಅಭ್ಯಾಸ ಚಟುವಟಿಕೆ ವಿಕ್ಷೀಸಿ ಶಾಲೆಯ ಆವರಣದಲ್ಲಿರುವ ಅಂಗನವಾಡಿ ೮ನೇ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಕಲಿಕೆ ಕುರಿತು ಹಾಗೂ ಮಕ್ಕಳಿಗೆ ನೀಡುವ ಆಹಾರದ ಬಗ್ಗೆ ಪರಿಶೀಲನೆ ನಡೆಸಿದ್ದರು.
ಸರಕಾರಿ ಪ್ರೌಢ ಶಾಲೆ, ಕಸ್ತೂರಿ ಬಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮೂಲ ಭೂತ ಸೌಕರ್ಯ ಕುರಿತು ಪರಿಶೀಲಿಸಿ ನ್ಯೂನ್ಯತೆಗಳನ್ನು ಸರಿ ಪಡಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.