ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾರಾಷ್ಟ್ರದ ಲಾಥೂರ್‌ನಲ್ಲಿ ಕೋಳಿ ಶೀತ ಜ್ವರ ಕಂಡು ಬಂದ ಹಿನ್ನೆಲೆ ವಿಜಯಪುರದಲ್ಲಿ ಹಕ್ಕಿ ಜ್ವರ ಹರಡದಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಗಡಿ ಭಾಗ ಜಿಲ್ಲೆಗಳಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ ಬೇರೆ ರಾಜ್ಯದಿಂದ ಬರುವ ಕೋಳಿ ಹಾಗೂ ಮೊಟ್ಟೆಯ ಮೇಲೆ ನಿಗಾ ಇರಿಸಲು ಹಾಗೂ ಕೆರೆ, ನೀರಿನ ಸಂಗ್ರಹಾರಗಳಲ್ಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮೃತಪಟ್ಟ ಹಕ್ಕಿಗಳನ್ನು ಪತ್ತೆ ಹಚ್ಚಲು ತಿಳಿಸಿಲಾಗಿದ್ದು, ಸಾರ್ವಜನಿಕರು, ಕೋಳಿ ಉತ್ಪನ್ನ ಹಾಗೂ ಮಾರಾಟಗಾರರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.