ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಕ್ಯಾನ್ಸರ್ ಕುರಿತು ಮುಂದುವರೆದ ವೈದ್ಯಕೀಯ ಶಿಕ್ಷಣ ರಾಜ್ಯ ಮಟ್ಟದ ಉಪನ್ಯಾಸ ಕಾರ್ಯಕ್ರಮ ಫೆಬ್ರವರಿ 2 ರಂದು ರವಿವಾರ ನಗರದಲ್ಲಿ ನಡೆಯಲಿದೆ.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬೆಳಿಗ್ಗೆ 9.30ಕ್ಕೆ ಈ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬೆಳಿಗ್ಗೆ 10.30ಕ್ಕೆ ಉದ್ಘಾಟನೆ ನಡೆಯಲಿದ್ದು, ಸಿಕಂದರಾಬಾದಿನ ರೆನೊವಾ ಸೌಮ್ಯ ಕಾಂಪ್ರಿಹೆನ್ಸಿವ್ ಕ್ಯಾನ್ಸರ್ ಸೆಂಟರ್ ನ ಮೆಡಿಕಲ್ ಆಂಕಾಲಜಿ ವಿಭಾಗದ ನಿರ್ದೇಶಕ ಮತ್ತು ಮುಖ್ಯಸ್ಥ ಡಾ. ಪಿ. ಎಸ್. ದತ್ತಾತ್ರೆಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ಶಾಸ್ತ್ರ ವಿಭಾಗದ ಪ್ರೊ. ಆರ್. ಸಿ. ಬಿದರಿ, ಆಶಾ ಎಂ. ಪಾಟೀಲ ಉಪಸ್ಥಿತರಿರಲಿದ್ದಾರೆ.
ಡಾ. ಸಿ. ಆರ್. ಬಿದರಿ ಸ್ಮಾರಕ ದತ್ತಿ ವತಿಯಿಂದ ಆಯೋಜಿಸಲಾಗಿರುವ ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಂಬೈ ಮತ್ತು ಹೈದರಾಬಾದ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸುಮಾರು 400 ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಂಜೀವ ಬೆಂಟೂರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.