ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಆನೆಕಾಲು ರೋಗ ತಡೆಗೆ ಡಿ.ಈ.ಸಿ ಮಾತ್ರೆ ನುಂಗುವುದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡಿ, ಜಾಗೃತಿ ಮೂಡಿಸುವ ಕಾರ್ಯ ಸಂಬಂಧಿಸಿದ್ದ ಇಲಾಖೆಗಳು ಯಶಸ್ವಿಯಾಗಿ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಫೆ.೧೦ ರಿಂದ ಸಿಂದಗಿ ಹಾಗೂ ಮುದ್ದೇಬಿಹಾಳ ತಾಲೂಕಿನಲ್ಲಿ ಸಾಮೂಹಿಕ ಆನೆಕಾಲು ರೋಗದ ಔಷದ ನುಂಗಿಸುವ ಕಾರ್ಯಕ್ರಮದ ಕುರಿತು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ ಆರೋಗ್ಯ ಇಲಾಖೆಯ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಆನೇಕಾಲು ರೋಗ, ವೃಷಣಬಾವು ರೋಗಗಳ ಲಕ್ಷಣಗಳ, ಹರುಡಿವಿಕೆ, ತಡೆಗಟ್ಟುವಿಕೆ ಮತ್ತು ಮುಂಜಾಗ್ರತೆ ಕ್ರಮವಾಗಿ ಮಾತ್ರೆಗಳನ್ನು ಸೇವಿಸುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಅವರು ಹೇಳಿದರು.
ಈ ಕಾರ್ಯಕ್ರಮಕ್ಕೆ ಸಂಬಂದಿಸಿದಂತೆ ಜಿಲ್ಲಾ ಮಟ್ಟದ ಒಬ್ಬ ನೋಡಲ್ ಅಧಿಕಾರಿಯನ್ನು ಗುರುತಿಸಿ, ಅಧಿಕಾರಿಯು ತಮ್ಮ ಅಧೀನ ಕಾರ್ಯಾಲಯಗಳಿಗೆ ಅವಶ್ಯಕ ಅಗತ್ಯತೆಗಳನ್ನು ಪೂರೈಸುವಂತೆ ನಿರ್ದೇಶನಗಳನ್ನು ನಿಡಬೇಕು. ಆರೋಗ್ಯ ಇಲಾಖೆಯು ಪ್ರಾ.ಆ. ಕೇಂದ್ರ, ತಾಲೂಕು ಮಟ್ಟದಲ್ಲಿ ಕೈಗೊಳ್ಳವ ಪೂರ್ವಬಾವಿ ಮತ್ತು ಎಂಡಿಎ ಸಮಯದಲ್ಲಿ ಭಾಗವಹಿಸಿ ಕಾರ್ಯಕ್ರಮದ ಸ್ಥಳಿಯ ಅಗತ್ಯತೆಗಳನ್ನು ಪೂರೈಸಬೇಕು.
ಅಂಗನವಾಡಿ ಕಾರ್ಯಕರ್ತೆಯರು ಆಯಾ ಗ್ರಾಮದ ಔಷಧಿ ನುಂಗಿಸುವ ತಂಡದ ಸಕ್ರಿಯ ಸದಸ್ಯರಗುರುತಿಸಿ ಅಂಗನವಾಡಿ ಶಾಲೆಯಲ್ಲಿ ಎಲ್ಲಾ ಅರ್ಹ ಮಕ್ಕಳಿಗೆ ಮಾತ್ರೆಗಳನ್ನು ನುಂಗಿಸುಲು ತಾಲೂಕಿನ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅವರು ತಿಳಿಸಿದರು .
ಕುಷ್ಠರೋಗದ ಸಭೆ: ಸಾರ್ವಜನಿಕರಲ್ಲಿರುವ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಆಶಾ ಕಾರ್ಯ ಕರ್ತರಿಂದ ಹಿಡಿದು ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಣ್ಣ ಗೆಣ್ಣೂರು ಹೇಳಿದರು.
ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ-೨೦೨೫ರ ಬಗ್ಗೆ ಜಾಗೃತಿ ಕಾರ್ಯವನ್ನು ಎಲ್ಲ ಇಲಾಖೆಯ ಅಧಿಕರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ಮಾಡಬೇಕೆಂದು ಅವರು ಹೇಳಿದರು.
ಕುಷ್ಠರೋಗದ ಚಿಕಿತ್ಸೆಯು ಸಂಪೂರ್ಣ ಉಚಿತವಾಗಿದ್ದು, ರೋಗಿಯ ಮನೆಯ ಬಾಗಿಲಿಗೆ ಚಿಕಿತ್ಸೆ ದೊರೆಯುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವತ್ತ ಕಾರ್ಯಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು ಮತ್ತು ಹಿರಿಯ ಮುಖಂಡರು ಸ್ಪರ್ಶ್ ಕುಷ್ಠರೋಗ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಸಹಕರಿಸಬೇಕು ಮತ್ತು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟ ವಾರ್ಡ್ ಸದಸ್ಯರಿಗೆ ಕಾರ್ಯಕ್ರಮದ ಬಗ್ಗೆ ವಿವರ ನೀಡಬೇಕು ಎಂದು ಅವರು ಹೇಳಿದರು.
ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕುಷ್ಠರೋಗದ ಬಗ್ಗೆ ಅಧ್ಯಾಪಕರು ಅರಿವು ಮೂಡಿಸುವುದು ಹಾಗೂ ನಿಬಂಧ ಸ್ಪರ್ಧೆ ಭಾಷಣಗಳ ಮೂಲಕ ಅರಿವು ಮೂಡಿಸುವುದು ಪ್ರತಿ ದಿನ ಪ್ರಾರ್ಥನಾ ಸಮಯದಲ್ಲಿ ಕುಷ್ಠರೋಗದ ಬಗ್ಗೆ ತಿಳುವಳಿಕೆ ನೀಡಬೇಕು ಹಾಗೂ ವಸತಿ ಶಾಲೆ ಹಾಗೂ ಹಾಸ್ಟೇಲ್‌ಗಳಲ್ಲಿ ಸ್ಪರ್ಶ್ ಕುಷ್ಠ ರೋಗ ಅರಿವು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಶಂಕಿತ ಕುಷ್ಠರೋಗ ಪ್ರಕರಣಗಳನ್ನು ಗುರ್ತಿಸಿ, ಚಿಕಿತ್ಸೆಗೆ ಒಳಪಡಿಸಲು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು.
ಸಾಂಕ್ರಾಮಿಕ ರೋಗ ಕುರಿತು: ನಾಯಿ, ಹಾವುಗಳು ಕಚ್ಚಿದಾಗ ಸ್ವಾಮಿಗಳಿಂದ ದಾರ ಕಟ್ಟಿಸಿಕೊಂಡರೇ ಸರಿಯಾಗುತ್ತದೆ ಎಂಬ ಮೂಡನಂಬಿಕೆಯಿಂದ ಜನರಿಗೆ ಹೊರ ತರುವ ಕಾರ್ಯವಾಗಬೇಕು.
ಕೆಲ ಮಕ್ಕಳು ನಾಯಿ ಕಚ್ಚಿದಾಗ ಭಯದಿಂದ ಪಾಲಕರಿಗೆ ಹೇಳದೆ ಅರಿವಿಲ್ಲದೆ ತಮ್ಮ ಆರೋಗ್ಯಕ್ಕೆ ಕುತ್ತು ತಂದುಕೊಳ್ಳುತ್ತಾರೆ. ಇದನ್ನು ತಡೆಯಲು ಮಕ್ಕಳಿಗೆ ಪ್ರಾಣಿ ಕಡಿತದಿಂದಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ಸಮರ್ಪಕವಾಗಿ ನೆರವೆರಿಸಲು ಸಹಕಾರಿಸಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮೇಲಿಂದ ಮೇಲೆ ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಸ್ವಚ್‌ಗೊಳಿಸಬೇಕು. ಟ್ಯಾಂಕ್ ಮೇಲಿನ ಮುಚ್ಚಳ್ಳ ಹಾಕಿಸಬೇಕು. ಒಡೆದ ಪೈಪ್ ಗಳನ್ನು ದುರಸ್ತಿ ಮಾಡಿಸಿ ಶುಧ ಕುಡಿಯುವ ನೀರನ್ನು ಜನರಿಗೆ ಒದಗಿಸಿ, ರೋಗ ತಡೆಗಟ್ಟಲು ಪಂಚಾಯತ, ಪುರಸಭೆ ಹಾಗೂ ನಗರಸಭೆಗಳು ಸಹಕರಿಸಬೇಕೆಂದು ಅವರು ಸೂಚಿಸಿದರು.
ಕಾಲ ಕಾಲಕ್ಕೆ ಅಡುಗೆ ತಯಾರಕರು, ಸಹಾಯಕರ ಆರೋಗ್ಯ ತಪಾಸಣೆ ನಡೆಸಬೇಕು. ಅಂಗನವಾಡಿ ಸಹಾಯಕಿಯರು ತಾಯಂದಿರ ಸಭೆ ಅಥವಾ ಇತರೆ ಕಾರ್ಯಕ್ರಮಗಳಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ರೆಬಿಸ್ ಕಾಯಿಲೆ ಬಗ್ಗೆ, ಚಿಕಿತ್ಸೆ ಕುರಿತು ವ್ಯಾಪಕವಾಗಿ ಮಾಹಿತಿ ನೀಡುವ ಕಾರ್ಯ ನಡೆಯಬೇಕೆಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು.
ಸಾಂಕ್ರಾಮಿಕ ರೋಗ ತಡೆಗಟ್ಟಲು ಒಗಟ್ಟಾಗಿ ಶ್ರಮಿಸಬೇಕೆಂದು ಅವರು ಎಲ್ಲ ಇಲಾಖೆಗಳಿಗೆ ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಕೆ.ಡಿ. ಗುಂಡಬಾವಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಜಾನ್.ಆಯ್.ಕಟವಟಿ, ಡಿಎಲ್‌ಓ ಅರ್ಚನ ಕುಲಕರ್ಣಿ, ಡಿಟಿಓ ಎಂ.ಬಿ.ಬಿರಾದಾರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಕವಿತಾ ದೊಡ್ಡಮನಿ, ಸತೀಶ ತಿವಾರಿ, ಎ.ಎ.ಮಾಯಗಿ, ಕೃಷ್ಣಕುಮಾರ ಜಾಧವ, ಜಿಲ್ಲಾ ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.