Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೦೧ ಮತ್ತು ೨ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ
(ರಾಜ್ಯ ) ಜಿಲ್ಲೆ

ಫೆ.೦೧ ಮತ್ತು ೨ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಸಿ.ಎಂ ಮನಗೂಳಿ ಕಾಲೇಜಿನ ಸಭಾಭವನದಲ್ಲಿ ಬೆಂಗಳೂರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸಿಂದಗಿ ಸಿ.ಎಂ.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಧಾರವಾಡ ವಿಭಾಗೀಯ ಪತ್ರಗಾರ ಕಛೇರಿ ಇವರುಗಳ ಸಹಯೋಗದಲ್ಲಿ ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ವಿಜಯಪುರ ಜಿಲ್ಲೆಯ ಸ್ವಾತಂತ್ರ್ಯ ಹೋರಟಗಾರರು ಹಾಗೂ ಕ್ರಾಂತಿಕಾರಿಗಳು ಎಂಬ ವಿಷಯದ ಮೇಲೆ ಫೆ.೦೧ ಮತ್ತು ೨ರಂದು ೨ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ ಎಂದು ಪ್ರಾಚಾರ್ಯ ಡಾ.ಬಿ.ಜಿ.ಪಾಟೀಲ ತಿಳಿಸಿದ್ದಾರೆ.
ಫೆ.೧ ಬೆಳಿಗ್ಗೆ ೧೦:೩೦ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷ, ಶಾಸಕ ಅಶೋಕ ಮನಗೂಳಿ ನೆರವೇರಿಸುವರು. ಧಾರವಾಡ ಪ್ರಾದೇಶಿಕ ಪತ್ರಾಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಆಶಯ ನುಡಿಯನ್ನು ವಿಶ್ರಾಂತ ಪ್ರಾಧ್ಯಾಪಕ ಎಮ್.ಎಸ್.ಹೈಯ್ಯಾಳಕರ ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಕರ್ನಾಟಕ ಪತ್ರಾಗಾರ ಇಲಾಖೆಯ ನಿರ್ದೇಶಕ ಡಾ.ಗವಿಸಿದ್ದಯ್ಯ, ನಿಂಗರಾಜ ಅಸ್ಕಿ ಇರಲಿದ್ದಾರೆ. ಕಲಬುರಗಿ ಪ್ರಾದೇಶಿಕ ಪತ್ರಾಗಾರ ಇಲಾಖೆಯ ಹಿರಿಯ ನಿರ್ದೇಶಕ ಡಾ.ವೀರಶೆಟ್ಟಿ ಗಾರಂಪಳ್ಳಿ ಗೌರವ ಉಪಸ್ಥಿತರಿರುವರು ಎಂದು ಇತಿಹಾಸ ವಿಭಾಗದ ಡಾ.ಅರವಿಂದ ಮನಗೂಳಿ ತಿಳಸಿದ್ದಾರೆ.
ಗೋಷ್ಠಿ ೦೧: ಫೆ೦೧ ಮಧ್ಯಾಹ್ನ ೧ ರಿಂದ ೩ರವೆರೆಗ ವಿಜಯಪುರ ಜಿಲ್ಲೆಯ ಸ್ವಾತಂತ್ರö್ಯ ಹೋರಾಟಗಾರರು ಹಾಗೂ ಕ್ರಾಂತಿಕಾರಿಗಳು ವಿಷಯದ ಹಿನ್ನೆಲೆಯಲ್ಲಿ ಗೋಷ್ಠಿ ಜರುಗುವುದು. ಗೋಷ್ಠಿಯ ಅಧ್ಯಕ್ಷತೆಯನ್ನು ಡಾ.ನಿಂಗರಾಜ ಅಸ್ಕಿ ವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಜಮಖಂಡಿಯ ಬಿ.ಎಲ್.ಡಿ.ಇ ಸ್ನಾತಕೋತ್ತರ ಕೇಂದ್ರದ ಸಂಯೋಜಕ ಡಾ.ಮಂಜುನಾಥ ಪಾಟೀಲ, ವಿಜಯಪುರ ಸಿಕ್ಯಾಬ ಕಾಲೇಜಿನ ಉಪನ್ಯಾಸಕ ಡಾ.ಮುಸ್ತಾಕ ಇನಾಮದಾರ, ಸಿಂದಗಿ ಸಿ.ಎಂ.ಮನಗೂಳಿ ಕಾಲೇಜಿನ ಅತಿಥಿ ಉಪನ್ಯಾಸಕ ರಾಹುಲ ಕಾಂಬಳೆ ಬರಲಿದ್ದಾರೆ. ಗೋಷ್ಠಿ ೦೨: ಮಧ್ಯಾಹ್ನ ೩ ರಿಂದ ೫ಗಂಟೆವರೆಗೆ ವಿಜಯಪುರ ಜಿಲ್ಲೆಯ ಸ್ವಾತಂತ್ರö್ಯ ಹೋರಾಟಗಾರರು ಹಾಗೂ ಕ್ರಾಂತಿಕಾರಿಗಳ ಮೇಲೆ ಮಹಾತ್ಮ ಗಾಂಧೀಜಿ ಹಾಗೂ ಬಾಲಗಂಗಾಧರ ತಿಲಕರ ಪ್ರಭಾವ ಇಷಯದ ಹಿನ್ನಲೆ ಗೋಷ್ಠಿ ನಡೆಯುವುದು. ಇದರ ಅಧ್ಯಕ್ಷತೆಯನ್ನು ವಿಶ್ರಾಂತ ಪ್ರಾಧ್ಯಾಪಕ ಎಮ್.ಎಸ್.ಹೊಸಮನಿ, ಸಂಪನ್ಮೂಲ ವ್ಯಕ್ತಿಗಳಾಗಿ ಜಮಖಂಡಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರಾಜೇಶ ಜಾಧವ, ವಿಜಯಪುರ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಬಿ.ಬಿರಾದಾರ, ರಾಂಪೂರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಅಪ್ಪು ಜಾಧವ ಭಾಗವಹಿಸಲಿದ್ದಾರೆ.
ಫೆ.೦೨: ಗೋಷ್ಠಿ ೦೩: ಬೆಳಿಗ್ಗೆ ೧೦ ರಿಂದ ೧೨ಗಂಟೆವರೆಗೆ ಭಾರತದ ಸ್ವಾತಂತ್ರö್ಯ ಚಳುವಳಿಯಲ್ಲಿ ವಿಜಯಪುರ ಜಿಲ್ಲೆಯ ಪತ್ರಿಕೆಗಳ ಪಾತ್ರ ವಿಷಯದ ಕುರಿತು ನಡೆಯಲಿದೆ. ಇದರ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಧ್ಯಾಪಕ ಬಿ.ಜಿ.ಮಠ ವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಹುನ್ನೂರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಗುರು ಹಿರೇಮಠ, ಸಿಂದಗಿ ಆರ್.ಡಿ.ಪಾಟೀಲ ಪಪೂ ಕಾಲೇಜಿನ ಉಪನ್ಯಾಸಕ ಡಾ.ಬಿ.ಬಿ ಜಮಾದಾರ ಹಾಗೂ ಎಚ್.ಜಿ.ಪಪೂ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಇರಲಿದ್ದಾರೆ. ಗೋಷ್ಠಿ ೦೪: ಮಧ್ಯಾಹ್ನ ೧೨ ರಿಂದ ೨ಗಂಟೆಯವರೆಗೆ ವಿಜಯಪುರ ಜಿಲ್ಲೆಯ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಕ್ರಾಂತಿಕಾರಿಗಳು ವಿಷಯದ ಹಿನ್ನೆಲೆ ಜರುಗುವುದು. ಇದರ ಅಧ್ಯಕ್ಷತೆಯನ್ನು ಜಿ.ಪಿ.ಪೋರವಾಲ್ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಸುಮಾ ನಿರಣಿ, ಸಂಪನ್ಮೂಲ ವ್ಯಕ್ತಗಳಾಗಿ, ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥೆ ಡಾ.ಹೇಮಾ ಜೈನಾಪೂರ, ಜಮಖಂಡಿ ಬಿ.ಎಲ್.ಡಿ.ಇ ಕಾನೂನು ಕಾಲೇಜಿನ ಉಪನ್ಯಾಸಕಿ ಬಿ.ಎಸ್.ಮಾಳಶೆಟ್ಟಿ, ಸಿ.ಎಂ ಮನಗೂಳಿ ಕಾಲೇಜಿನ ಅತಿಥಿ ಉಪನ್ಯಾಸಕ ಮಾಂತೇಶ ಸುಂಗಠಾಣ ಭಾಗವಹಿಸಲಿದ್ದಾರೆ. ಸಾಯಂಕಾಲ ೫ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಬಿ.ಜಿ.ಪಾಟೀಲ, ಮುಖ್ಯ ಅತಿಥಿಗಳಾಗಿ ಮಂಜುಳಾ ಎಲಿಗಾರ, ಎ.ಆರ್.ಹೆಗ್ಗಣದೊಡ್ಡಿ, ಗೌರವ ಉಪಸ್ಥಿತಿ ಡಾ.ಎಮ್.ಎಸ್.ಮುಜಾವರ ಭೀಮಾಶಂಕರ ಅರಳಗುಂಡಗಿ ವಹಿಸಿಕೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.