ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಹೈಸ್ಕೂಲ ಮೈದಾನದಲ್ಲಿರುವ ತಾಲೂಕು ಸಮ್ಮೇಳನದ ಕಾರ್ಯಾಲಯದ ಆವರಣದಲ್ಲಿ ತಾಲೂಕಿನ ಯರಗಲ್ಲ ಕಲಾವಿದ ಬಸವರಾಜ ಹಡಪದ ರಚಿಸಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.
ಈ ವೇಳೆ ಮಹಾದೇವ ಶಾಸ್ತ್ರಿಗಳು, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ, ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ, ಹಿರಿಯ ಸಾಹಿತಿ ಬಿ.ಎಂ.ಹಿರೇಮಠ, ಮಲಕೇಂದ್ರಗೌಡ ಪಾಟೀಲ ಸೇರಿದಂತೆ ಹಲವರು ಇದ್ದರು.

