ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಕಲಬುರಗಿ ರಸ್ತೆಯ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸ್ಕೂಲ್‌ನಲ್ಲಿ ಫೆ.೦೧ ಸಾಯಂಕಾಲ ೫ರಂದು ಭೀಮೋತ್ಸವ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ ಎಂದು ನಿರ್ದೇಶಕ ಪ್ರಶಾಂತ ಕಮತಗಿ ತಿಳಸಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಶಿಕ್ಷಣ ತಜ್ಞ, ಎಮ್.ಇ.ಎಸ್. ಟೀರ‍್ಸ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಎಚ್.ಎಸ್.ಗಣೇಶ ಭಟ್ಟ ಇರಲಿದ್ದಾರೆ. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೊಳ್ಳೂರ ವಹಿಸುವರು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಸಿದ್ದಾರೆ.
