ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂ ಸೈಟನಲ್ಲಿ ಒಟ್ಟು ೨ ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ ೮ರಂದು ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗಳು ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ದಿನದಂದು ಬೆಳಿಗ್ಗೆ ೮ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿದೆ ಹಾಗೂ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.