ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೇಲ್ಕಾಣಿಸಿದ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮಹಾನಗರಪಾಲಿಕೆ ಕಾಯ್ದೆ ೧೯೭೬ರ ಶೆಡ್ಯೂಲ್ ಘಿ ನಂತೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಉದ್ದಿಮೆದಾರರು ತಮ್ಮ ಉದ್ದಿಮೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿರುತ್ತದೆ.
ಅದರಂತೆ ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ಒಂದು ವರ್ಷ ಆಥವಾ ಐದು ವರ್ಷದ ಅವಧಿ ವರೆಗೆ ಉದ್ದಿಮೆ ಪರವಾನಿಗೆಯನ್ನು ಪಡೆಯಬಹುದಾಗಿರುತ್ತದೆ. ಅರ್ಜಿದಾರರು ನೇರವಾಗಿ ನಿಗಧಿತ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮಹಾನಗರ ಪಾಲಿಕೆ ಕಛೇರಿಗೆ ಸಲ್ಲಿಸಬಹುದಾಗಿದೆ. ಈಗಾಗಲೇ ಪರವಾನಗಿ ಪಡೆದ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ೨೦೨೪-೨೫ನೇ ಸಾಲಿಗೆ ನವೀಕರಣಗೊಳಿಸಲು ತಿಳಿಸಲಾಗಿದೆ.
ಉದ್ದಿಮೆ ಪರವಾನಿಗೆಯನ್ನು ಪಡೆಯದ/ನವೀಕರಣ ಗೊಳಿಸದ ಉದ್ದಿಮೆದಾರರ ವಿರುದ್ಧ ಕರ್ನಾಟಕ ಮಹಾನಗರಪಾಲಿಕೆ ಕಾಯ್ದೆ-೧೯೭೬ರ ಕಲಂ ೩೫೩ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.