ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕೇಂದ್ರ ಸರ್ಕಾರದ ಇಂದಿನ ಬಜೆಟ್ ಸದೃಡ ಭಾರತದ ಬುನಾದಿಯಾಗಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಾ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ೮ನೇ ಬಾರಿ ಭಾರತದ ಭವಿಷ್ಯವನ್ನು ಮುಂದಿಟ್ಟುಕೊಂಡು ಬಜೆಟ್ ಮಂಡಿಸಿ ರಾಷ್ಟ್ರ ರಾಜಕಾರಣದಲ್ಲಿ ಇತಿಹಾಸ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಜೆಟ್ ಸ್ವಾಗತಾರ್ಹ. ಬಡತನ ನಿರ್ಮೂಲನೆಗಾಗಿ ಅಭಿವೃದ್ದಿಯ ಹೆಜ್ಜೆಯನ್ನಿಟ್ಟಿರುವ ಕೇಂದ್ರ ಸರ್ಕಾರ ೨೦೨೪ರ ವಿಶ್ವ ಮುಂಚೂಣಿಯ ಭವಿಷ್ಯವನ್ನು ಮುಂದಿಟ್ಟುಕೊಂಡು ಬಜೆಟ್ ಮಂಡಿಸಿದೆ. ದೇಶದ ಸಾರಿಗೆ ಕೈಗಾರಿಕೆ, ಉದ್ಯೋಗ, ವೈದ್ಯಕೀಯ, ಶಿಕ್ಷಣ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ದಿಗೆ ಒತ್ತು ಕೊಟ್ಟಿದೆ ಎಂದು ಶ್ರೀಶೈಲಗೌಡ ಬಿರಾದಾರ ಹರ್ಷ ವ್ಯಕ್ತಪಡಿಸಿದರು.