ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರಸ್ತುತ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಕೊಡ ಮಾಡುವ ರಾಜ್ಯ ಪುರಸ್ಕಾರಕ್ಕೆ ಸಿಂದಗಿ ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಮತ್ತು ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ರೇಂಜರ್ ಪೂಜಾ ಕದ್ನಳ್ಳಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜಭವನದಲ್ಲಿ ಜರುಗುವ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಪುರಸ್ಕಾರವನ್ನು ಸ್ವೀಕರಿಸಲಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯ ಡಿ.ಎಂ.ಪಾಟೀಲ, ರೇಂಜರ್ ಲೀಡರ್ ಪ್ರತಿಕಾ ತಳವಾರ, ರೋವರ್ ಲೀಡರಾದ ತೇಜು ಪ್ರಕಾಶ ರಾಠೋಡ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.