ಸಿಂದಗಿ: ಮತಕ್ಷೇತ್ರದಲ್ಲಿ ಬಿಜೆಪಿ ಅಲೆಯು ಜೋರಾಗಿ ಬೀಸುತ್ತಿದ್ದು ಮತ್ತೆ ರಮೇಶ ಭೂಸನೂರ ಅವರು ಶಾಸಕರಾಗಿ ಈ ಬಾರಿ ಬಿಜೆಪಿ ಸರಕಾರದಲ್ಲಿ ಸಚಿವರಾಗುವುದು ಖಂಡಿತ ಎಂದು ಬಿಜೆಪಿ ಮುಖಂಡ ಡಾ.ಗೌತಮ್ ಚೌಧರಿ ಭವಿಷ್ಯ ನುಡಿದರು.
ತಾಲೂಕಿನ ಚಿಕ್ಕ ಅಲ್ಲಾಪುರ ಗ್ರಾಮದಲ್ಲಿ ಬುಧವಾರ ಸಂಜೆ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಅವರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಬಳಿಕ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು, ಜಾತ್ಯಾತೀತ ನಿಲುವಿನ ವ್ಯಕ್ತಿಯಾಗಿದ್ದು, ಸರ್ವ ಜನಾಂಗವನ್ನು ಪ್ರೀತಿಸುವ ಮನೋಭಾವ ಹೊಂದಿದ್ದಾರೆ. ಕ್ವೇತ್ರದಲ್ಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಾಧನೆಗಳನ್ನು ಮೆಚ್ಚಿ ಇಂದು ವಿವಿಧ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ತಾವೇ ಸ್ವಯಂಪ್ರೇರಣೆಯಿಂದ ಸೇರ್ಪಡೆಗೊಳ್ಳುತ್ತಿದ್ದಾರೆ. ಇದು ಬಿಜೆಪಿ ಗೆಲುವಿನ ಮುನ್ಸೂಚನೆಯಾಗಿದೆ ಎಂದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಭೂಸನೂರ ಅವರನ್ನು ಸಚಿವರನ್ನಾಗಿ ಮಾಡಲು ಮತ್ತೊಮ್ಮೆ ಅವರನ್ನು ಗೆಲ್ಲಿಸಬೇಕೆಂದು ಡಾ.ಗೌತಮ್ ಚೌಧರಿ ಮನವಿ ಮಾಡಿದರು.
ಶಾಸಕ ರಮೇಶ ಭೂಸನೂರ ಮಾತನಾಡಿ, ನನ್ನನ್ನು ಮೂರು ಬಾರಿ ಶಾಸಕನನ್ನಾಗಿ ಮಾಡಿದ ತಾವೆಲ್ಲ ನಾಲ್ಕನೆಯ ಬಾರಿಗೂ ಆಯ್ಕೆ ಮಾಡುವ ಮೂಲಕ ಅಭಿವೃದ್ಧಿ ಕೆಲಸ ಮುಂದುವರಿಸಲು ಶಕ್ತಿ ನೀಡಿ ಎಂದು ಮನವಿ ಮಾಡಿದರು.
ಈ ಗ್ರಾಮ ಬಸ್ ಸೌಲಭ್ಯದಿಂದ ವಂಚಿತವಾಗಿದ್ದು ತಾವು ಆಯ್ಕೆಯಾದ ಬಳಿಕ ಈ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿಪಡಿಸಿ ತಾವೇ ಬಸ್ ತೆಗೆದುಕೊಂಡೇ ಗ್ರಾಮಕ್ಕೆ ಬರುವುದಾಗಿ ಭರವಸೆ ನೀಡಿದರು.
ಬಿಜೆಪಿ ಮುಖಂಡ ಸಂತೋಷ ಪಾಟೀಲ ಡಂಬಳ, ಸಿದ್ದು ಬುಳ್ಳಾ ಮಾತನಾಡಿ, ರಮೇಶ ಭೂಸನೂರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.
ಮನೆ ಮನೆಗೆ ತೆರಳಿ ಮತಯಾಚನೆ
ಸಿಂದಗಿ: ತಾಲೂಕಿನ ಕರವಿನಾಳ, ಖಾನಾಪುರ, ಸಾಸಾಬಾಳ, ಸಾಸಾಬಾಳ ತಾಂಡಾ, ವಂದಾಲ ಗ್ರಾಮಗಳಲ್ಲಿ ಬುಧವಾರ ಸಂಜೆ ಬಿಜೆಪಿ ಅಭ್ಯರ್ಥಿ, ಶಾಸಕ ರಮೇಶ ಭೂಸನೂರ ಮತ್ತು ಮುಖಂಡ ಡಾ.ಗೌತಮ್ ಚೌಧರಿ ಅವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ, ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದರು.
ಸಾಸಾಬಾಳ ಗ್ರಾಮದಲ್ಲಿ ವಿವಿಧ ಸಮಾಜಗಳ ಹಿರಿಯರು ಶಾಸಕ ಭೂಸನೂರ ಅವರನ್ನು ಸನ್ಮಾನಿಸಿದರು.
ಬಿಜೆಪಿ ಮುಖಂಡರಾದ ಸಂತೋಷ ಪಾಟೀಲ ಡಂಬಳ, ಸಿದ್ದು ಬುಳ್ಳಾ, ಶಿವಣ್ಣ ಸಾಹು ಮಾರಲಬಾವಿ, ಶ್ರೀಶೈಲ ಚೆಳ್ಳಗಿ, ಮಹಾಂತೇಶ ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಇದ್ದರು.