ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪದ್ಮರಾಜ ವಿದ್ಯಾರ್ಧಕ ಸಂಸ್ಥೆಯು ಪ್ರಾಚೀನ ಕಾಲದ ನಳಂದ ವಿಶ್ವವಿದ್ಯಾಲಯದಂತೆ ಕಾರ್ಯನಿರ್ವಹಿಸುತ್ತಿದೆ. ಕಲ್ಯಾಣ ಕರ್ನಾಟಕದ ಎಲ್ಲ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ ಎಂದು ಸಾಲೋಟಗಿಯ ಶ್ರೀ ಶಿವಯೋಗೇಶ್ವರ ಪಪೂ ಕಾಲೇಜಿನ ನಿವೃತ್ತ ಪ್ರಾಚಾರ್ಯ ಸಿ.ಎಸ್.ಮಂಗಳೂರು ಹೇಳಿದರು.
ಸಿಂದಗಿ ಪಟ್ಟಣದ ಮಹಾವಿದ್ಯಾಲಯದ ಸಭಾಭವನದಲ್ಲಿ ಶ್ರೀ ಪದ್ಮರಾಜ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಓದುವ ವಿದ್ಯಾರ್ಥಿಗಳಿಗೆ, ಬಡ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಪ್ರೋತ್ಸಾಹವನ್ನು ನೀಡುತ್ತಾ ಸೇವಾ ಮನೋಭವನೆಯಿಂದ ಕರ್ತವ್ಯವನ್ನು ನಿರ್ವಹಿಸಿ ತಮ್ಮ ವಿದ್ಯೆಯನ್ನು ಧಾರೆ ಎರೆಯುವವರಾಗಿದ್ದಾರೆ ಎಂದರು.
ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ ಸಂಸ್ಥೆಯ ಚೇರಮನ್ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಮಹಿಳೆಯರು ಯಾರ ಮೇಲೆಯೂ ಅವಲಂಬಿತರಾಗದೇ ಸ್ವಾವಲಂಬಿಗಳಾಗಬೇಕು. ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಂಡು ಕೌಶಲ್ಯಾಧಾರಿತ ಉದ್ಯೋಗಗಳನ್ನು ಪಡೆದು ಉನ್ನತ ಸ್ಥಾನಕ್ಕೆ ಬರಬೇಕೆಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಈ ವೇಳೆ ಪ್ರಾಚಾರ್ಯ ಎಂ.ಎಸ್ ಹೈಯಾಳಕರ ಅಧ್ಯಕ್ಷೀಯ ಮಾತುಗಳನ್ನಾಡಿದರು. ಕಾರ್ಯಾಧ್ಯಕ್ಷ ಎ.ಎ.ಕೋಕನಿ, ಪ್ರಧಾನ ಕಾರ್ಯದರ್ಶಿ ಪ್ರೀತಿ ಪಾಟೀಲ, ನಿವೃತ್ತ ಉಪನ್ಯಾಸಕಿ ಪಿ.ಎಸ್.ಸರನಾಡಗೌಡ ವೇದಿಕೆಯ ಮೇಲಿದ್ದರು.
ಇತ್ತೀಚೆಗೆ ಸಂಸ್ಥೆಯ ಅಂಗ ಸಂಸ್ಥೆಯಾದ ಆರ್.ಡಿ ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಿ.ಎಸ್.ಸರನಾಡಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಆರ್.ಡಿ.ಪಾಟೀಲ ಕಾಲೇಜನ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಪೂಜಾರಿ ಮಹಾವಿದ್ಯಾಲಯದ ಸಿಬ್ಬಂದಿಗಳಾದ ಯು.ಸಿ ಪೂಜೇರಿ, ಎಂ.ಪಿ.ಸಾಗರ. ಜಿ.ಎ.ನಂದಿಮಠ, ಆರ್.ಎ.ಹಾಲಕೇರಿ, ಹೇಮಾ ಹಿರೇಮಠ, ವರ್ಷಾ ಪಾಟೀಲ, ಲಕ್ಷ್ಮಿ ಮಾರ್ಸನಳ್ಳಿ, ಹೇಮಾ ಕಾಸರ, ಸತೀಶ ಕಕ್ಕಸಗೇರಿ, ಲಕ್ಷ್ಮಿ ಭಜಂತ್ರಿ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ತಬಸುಮ ಮುಲ್ಲಾ ಮತ್ತು ತಯ್ಯಬಾ ಮುಲ್ಲಾ ನಿರೂಪಿಸಿದರು. ಉಪನ್ಯಾಸಕ ಜಿ.ಎಸ್‌ಕುಲಕರ್ಣಿ ಸ್ವಾಗತಿಸಿದರು. ಪಲ್ಲವಿ ಹೆಳವರ ಪ್ರಾರ್ಥಿಸಿದರು, ಪ್ರೀತಿ ಪಾಟೀಲ ವಂದಿಸಿದರು.