ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ ಎ.ಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿ ಕುರಿತು ಜಿಲ್ಲಾಮಟ್ಟದ ಟಾಸ್ಕ ಪೋರ್ಸ್ ಸಮಿತಿ ಸಭೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಜನವರಿ ೨೩ರಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪ್ರತಿ ಕ್ವಿಂಟಾಲ್ ಕಡಲೆಕಾಳು ಬೆಲೆಯನ್ನು ರೂ .೫೬೫೦/- ನಂತೆ ಪ್ರತಿ ರೈತರಿಂದ ಪ್ರತಿ ಎಕರೆಗೆ ಕನಿಷ್ಟ ೦೪ (ನಾಲ್ಕು) ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ ೨೦ (ಇಪ್ಪತ್ತು) ಕ್ವಿಂಟಾಲ್ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳನ್ನು ಖರೀದಿಸತಕ್ಕದ್ದು ಹಾಗೂ ಕಡಲೆಕಾಳು ಖರೀದಿಸಲು ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿಗಳನ್ವಯ ರೈತರ ನೋಂದಣಿಯನ್ನು ಆದೇಶ ದಿನಾಂಕದಿಂದ ೮೦ ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು ೯೦ ದಿನಗಳವರೆಗೆ ನಿಗದಿಪಡಿಸಿದೆ.
ಕಡಲೆಕಾಳು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು ನಾಫೇಡ್ ರವರು ಅಭಿವೃದ್ಧಿಪಡಿಸಿರುವ ಇ-ಸಮೃದ್ಧಿ ಹಾಗೂ ಇ-ಸಂಯುಕ್ತ ದತ್ತಾಂಶದಲ್ಲಿ ರಾಜ್ಯದ ರೈತರ ಮಾಹಿತಿಯನ್ನು FRUITSತಂತ್ರಾಂಶದೊಂದಿಗೆ ಸಂಯೋಜಿಸಿಕೊಂಡು ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ, ಬೆಳೆ ಸಮೀಕ್ಷೆ ದತ್ತಾಂಶUIDAI ದೊಂದಿಗೆ ತಾಳೆ ಮಾಡಿ ವಿವರಗಳನ್ನು ಇಂದ್ರೀಕರಿಸಲಾಗಿದೆ. ರೈತರ ನೋಂದಣಿ ಮತ್ತು ಖರೀದಿ ಕೈಗೊಳ್ಳುವುದು. ಹಾಗೂ ಖರೀದಿ ನಂತರ ರೈತರ ಖಾತೆಗೆ ರಾಜ್ಯ ಸರ್ಕಾರದ ಆಃಖಿ ಮೂಲಕ ಖರೀದಿ ಮೊತ್ತವನ್ನು ಪಾವತಿಸಲು ಕ್ರಮವಹಿಸತಕ್ಕದ್ದು.
ಖರೀದಿ ಸಂಸ್ಥೆಗಳು ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ನಾಫೆಡ್ ಮಾರ್ಗ ಸೂಚಿಯನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಧೃಡ PACS/VSSN/FPO/TAPCMS ಸಂಸ್ಥೆಗಳ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯುವುದು.
- ಕಡೆಲಕಾಳು ಖರೀದಿ ಪ್ರಕ್ರಿಯೆಯಲ್ಲಿ ಎಫ್.ಎ.ಕ್ಯೂ- ಗುಣಮಟ್ಟದ ಪರಿಶೀಲನೆಗಾಗಿ ಜಿಲ್ಲಾಡಳಿತ ಮಟ್ಟದಲ್ಲಿ ಕೃಷಿ/ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುವ ಅಧಿಕಾರಿ/ಸಿಬ್ಬಂದಿಗಳನ್ನು ಬಳಸಿಕೊಳ್ಳುವುದು. ತರಬೇತಿ ಅವಶ್ಯವಿದ್ದಲ್ಲಿ ಅಂತಹ ಸಿಬ್ಬಂದಿಗಳಿಗೆ ಸೂಕ್ತ ಎಫ್.ಎ.ಕ್ಯೂ ಗ್ರೇಡಿಂಗ್ ತರಬೇತಿ ನೀಡಲು ಸಂಬಂಧಪಟ್ಟ ಖರೀದಿ ಸಂಸ್ಥೆಗಳು ಕ್ರಮ ವಹಿಸತಕ್ಕದ್ದು.
ವಿಜಯಪುರ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಕಡಲೆ ಕೇಂದ್ರಗಳ ಉಸ್ತುವಾರಿಯನ್ನು ಸಂಬಂಧಪಡುವ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ನೊಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ತಿಳಿಸಿದೆ.
ಖರೀದಿ ಸಂಸ್ಥೆಗಳು ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನ್ವಯ ಕಡಲೆಕಾಳು ಎಫ್.ಎ.ಕ್ಯೂ, ಗುಣಮಟ್ಟವನ್ನು ಖರೀದಿ ಕೇಂದ್ರದ ಹಂತದಲ್ಲಿಯೇ ಖಾತರಿಪಡಿಸಿಕೊಂಡು ಖರೀದಿ ಪ್ರಕ್ರಿಯೆ ಕೈಗೊಳ್ಳತಕ್ಕದ್ದು ಹಾಗೂ ಖರೀದಿಸಿದ ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನ್ವಯ ವೈಜ್ಞಾನಿಕ ಗೋದಾಮುಗಳಲ್ಲಿ ದಾಸ್ತಾನು ಮಾಡತಕ್ಕದ್ದು.
ಕಡಲೇಕಾಳು ಖರೀದಿ ಪ್ರಕ್ರಿಯೆ ಮಾಹಿತಿಯನ್ನು ರಾಜ್ಯ ಸರ್ಕಾರದ ಇ-ಆಡಳಿತ ಹಾಗೂ ಇತರೆ ಸಂಬಂಧಪಟ್ಟ ಇಲಾಖೆಗಳಿಗೆ ನಿಗದಿತ ಅವಧಿಯಲ್ಲಿ ನೀಡಲು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳು/ಏಜೆನ್ಸಿಗಳು ಕ್ರಮವಹಿಸತಕ್ಕದ್ದು, - ಕಡಳೆಕಾಳು ಖರೀದಿ ಪೂರ್ವದಲ್ಲಿ ಖರೀದಿ ಕೇಂದ್ರಗಳಾದ PACS/TAPCMS/FPOಸಂಘಗಳು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ವಿಜಯಪುರ ಅವರೊಂದಿಗೆ ಒಪ್ಪಿಗೆ ಪತ್ರ(Agreement) ಮಾಡಿಕೊಂಡು ನಂತರ ಖರೀದಿಸಲು ಸೂಚಿಸಿದೆ.
- ರೈತರು ಕಡಳೆಕಾಳು ಖರೀದಿ ಕೇಂದ್ರಕ್ಕೆ ತಂದು ತಮ್ಮ ಉಪಸ್ಥಿತಿಯಲ್ಲಿಯೇ ತೂಕ ಮಾಡಿಕೊಳ್ಳಬೇಕು. ಅಧೀಕೃತ ರಶಿದೀಯನ್ನು ಪಡೆದುಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ಕಡಲೆಕಾಳು ಇಳಿಸುವ ಜವಾಬ್ದಾರಿ ರೈತರದ್ದಾಗಿರುತ್ತದೆ.
ವಿಜಯಪುರ ಜಿಲ್ಲೆಯಲ್ಲಿ ಕಡಲೆಕಾಳು ಖರೀದಿಗೆ ಅಗತ್ಯವಾದ ಉಗ್ರಾಣಗಳು ಖರೀದಿ ಕೇಂದ್ರದಿಂದ ೫೦ ಕೀ.ಮಿ.ಒಳಗೆ ಲಭ್ಯವಿಲ್ಲದಿದ್ದಲ್ಲಿ ೫೦ ಕೀ.ಮಿ ಗಿಂತ ಹೆಚ್ಚಿನ ದೂರದ ಉಗ್ರಾಣಗಳಲ್ಲಿ ಶೇಖರಿಸಲು ರೈತರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳುವುದು. ಕಡಲೆಕಾಳು ಉತ್ಪನ್ನದ ಖರೀದಿಯ ಕಾಲಾವಧಿ ಖರೀದಿಯ ಪ್ರಮಾಣ ನೀಡಲಾಗುವ ಕನಿಷ್ಠ ಬೆಂಬಲ ಬೆಲೆ ಇತ್ಯಾದಿ ಕುರಿತು ಕರ ಪತ್ರ ಹಾಗೂ ಬ್ಯಾನರಗಳ ಮೂಲಕ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಿ ಖರೀದಿಯ ಪ್ರಕ್ರಿಯೆಯನ್ನು ಹೆಚ್ಚು ಪ್ರಚಾರ ಪಡಿಸುವಂತೆ ಖರೀದಿ ಏಜೆನ್ಸಿಯ ಶಾಖಾ ವ್ಯವಸ್ಥಾಪಕರಿಗೆ ಸೂಚಿಸಲಾಯಿತು.
ಕಡೆಲಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆಕಾಳು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸತಕ್ಕದ್ದು. - ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತ ನಿಧಿ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು. ಮೇಲ್ಕಂಡ ಎಲ್ಲ ಅಂಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ರೈತರಿಗೆ ಅನ್ಯಾಯವಾಗದಂತೆ ಸರ್ಕಾರದ ಯೋಜನೆಯನ್ನು ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಮಾನ್ಯ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಸಹಕಾರ ಸಂಘಗಳ ಉಪ ನಿಬಂಧಕರು, ಕೆ.ಎಸ್.ಸಿ.ಎಮ್.ಎಫ್ ಶಾಖಾ ವ್ಯವಸ್ಥಾಪಕರು, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.