Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ

ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ

ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧೂಮಪಾನ ಮಾಡುವವರಿಗೆ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು
(ರಾಜ್ಯ ) ಜಿಲ್ಲೆ

ಧೂಮಪಾನ ಮಾಡುವವರಿಗೆ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವ ಕ್ಯಾನ್ಸರ್ ದಿನಾಚರಣೆ ಜಾಥಾಗೆ ಚಾಲನೆ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ತ ಗುಣಾರಿ ಎಚ್ಚರಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜೀವಕ್ಕೆ ಆಪತ್ತು ತರುವ ಹಲವು ಕಾಯಿಲೆಗಳ ಮೂಲ ಜೀವನಶೈಲಿ. ಅಂತಹ ಕಾಯಿಲೆಗಳಲ್ಲಿ ಕ್ಯಾನ್ಸರ್ ಪ್ರಮುಖವಾದದ್ದು. ಇದನ್ನು ಹಲವು ಸಂಶೋಧನೆಗಳು ಸಾಬೀತುಪಡಿಸಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಸಂಪತ್ತ ಗುಣಾರಿ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಾಲಯ ಜಿಲ್ಲಾ ಸಮೀಕ್ಷಾ ಘಟಕ ವಿಜಯಪುರ ಇವರ ಸಂಯುಕ್ತಾಶ್ರಯಲ್ಲಿ ಮಂಗಳವಾರ ಬೆಳಿಗ್ಗೆ ಸರಕಾರಿ ನರ್ಸಿಂಗ ಕಾಲೇಜು ಆವರಣದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ ಗುಣಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಶಿವಾನಂದ ಮಾಸ್ತಿಹೊಳಿ ರವರು ಜಂಟಿಯಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾಮಾನ್ಯವಾಗಿ ಕ್ಯಾನ್ಸರ ಉಂಟು ಮಾಡುವ ಜೀವನಶೈಲಿಗಳಲ್ಲಿ ದುಶ್ಚಟವಾದ ಧೂಮಪಾನ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವ ಪ್ರಮುಖ ಅಂಶವಾಗಿದೆ. ಧೂಮಪಾನ ಮಾಡುವವರಿಗೆ ಕ್ಯಾನ್ಸರ ಬರುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ ಎಂದು ಅವರು ತಿಳಿಸಿದರು.
ಅಧಿಕ ತೂಕ ಮತ್ತು ಬೊಜ್ಜು ಸಹ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ದೈಹಿಕ ಚಟುವಟಿಕೆಯ ಕೊರತೆ ಕ್ಯಾನ್ಸರ್ ಅಪಾಯವನ್ನು ನಿಮ್ಮ ಜೀವನಶೈಲಿಯಲ್ಲಿ ಕೆಲವು ಸಣ್ಣ ಬದಲಾವಣೆಗಳನ್ನು ಮಾಡುವ ಮೂಲಕ ಕ್ಯಾನ್ಸರ್ ಅಪಾಯ ಕಡಿಮೆ ಮಾಡಬಹುದು ಎಂದು ಅವರು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ|| ಶಿವಾನಂದ ಮಾಸ್ತಿಹೊಳಿ ರವರು ಮಾತನಾಡಿ ದೈಹಿಕ ಚಟುವಟಿಕೆಗಳು ಬಹುತೇಕ ರೋಗಗಳನ್ನು ನಿಯಂತ್ರಿಸುತ್ತದೆ. ಹೀಗಾಗಿ ಪ್ರತಿದಿನ ಕನಿಷ್ಠ ೩೦ ನಿಮಿಷಗಳ ಕಾಲ ವ್ಯಾಯಾಮ ಮಾಡಿ. ಯೋಗ, ನಡಿಗೆ, ಓಟ ಮತ್ತು ಈಜು ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ದಿನನಿತ್ಯ ಆರೋಗ್ಯಕರ ಆಹಾರ ಸೇವಿಸುವುದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ|| ಅಪ್ಪಾಸಾಹೇಬ ಇನಾಮದಾರ ರವರು ಮಾತನಾಡಿ ದುಶ್ಚಟದಿಂದ ದೂರ ಇರಿ. ನಿಯಮಿತವಾಗಿ ವೈದ್ಯರಿಗೆ ಭೇಟಿ ನೀಡಿ ಮತ್ತು ಕ್ಯಾನ್ಸರ್ ತಪಾಸಣೆಗಳನ್ನು ಮಾಡಿಸಿ. ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆ ಹಚ್ಚಿದಲ್ಲಿ ಚಿಕಿತ್ಸೆ ಸುಲಭವಾಗಿದ್ದು, ಅನಗತ್ಯ ಭಯ ಬೇಡ. ಕ್ಯಾನ್ಸರ್‌ನಿಂದ ಗೆದ್ದವರು ಸಾಕಷ್ಟು ಜನ ನಮ್ಮ ಮಧ್ಯದಲ್ಲಿ ಇದ್ದಾರೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸರಕಾರಿ ನರ್ಸಿಂಗ ಕಾಲೇಜ ಪ್ರಾಂಶುಪಾಲರು, ಜಿಲ್ಲಾ ಮೇಲ್ವಿಚಾರಣಾಧಿಕಾರಿಗಳಾದ ಮೋತಿಲಾಲ ಲಮಾಣಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ರೇಖಾ ದಶವಂತ, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ (ಎನ್.ಸಿ.ಡಿ ಘಟಕ) ಡಾ|| ಪ್ರೀಯದರ್ಶನಿ ಪಾಟೀಲ, ನರ್ಸಿಂಗ ಕಾಲೇಜಿನ ಭೋದಕ ಸಿಬ್ಬಂದಿ ವರ್ಗದವರು, ಐ.ಇ.ಸಿ ವಿಭಾಗದ ಗಣಕಯಂತ್ರ ಸಹಾಯಕರಾದ ಕುಮಾರ ರಾಠೋಡ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ನರ್ಸಿಂಗ ಕಾಲೇಜಿನ ವಿದ್ಯಾರ್ಥಿ/ವಿದಾರ್ಥಿನಿಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ

ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ

ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ
    In (ರಾಜ್ಯ ) ಜಿಲ್ಲೆ
  • ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ
    In ವಿಶೇಷ ಲೇಖನ
  • ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.