ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ-೫೦ ರ ಮೇಲಿನ ಸಂಚಾರ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಉಪತಹಶೀಲ್ದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಮಂಗಳವಾರ ಆಗಮಿಸಿದ ಕರ್ನಾಟಕ ಸೇನೆಯ ಪದಾಧಿಕಾರಿಗಳು ಸಂಚಾರ ವ್ಯವಸ್ಥೆಯ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಪಟ್ಟಣದ ಮಧ್ಯೆದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಇದರಿಂದ ಟ್ರಾಫಿಕ್ ಸಮಸ್ಯೆಗಳು ಹೆಚ್ಚಾಗುತ್ತಿದ್ದು ಜನಸಂಚಾರಕ್ಕೆ ತೊಂದರೆಯಾಗುತ್ತಿದೆ.
ರಾಷ್ಟಿçÃಯ ಹೆದ್ದಾರಿ ಮೇಲೆ ತರಕಾರಿ ಸಹಿತ ವಿವಿಧ ವ್ಯಾಪಾರ ವಹಿವಾಟು ನಡೆಸುವುದರಿಂದ ಜನದಟ್ಟಣೆ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ದಿನದಲ್ಲಿ ಇಬ್ಬರು ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದು ಕೂಡಲೇ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಹೆದ್ದಾರಿ ಮೇಲಿನ ತರಕಾರಿ ಮಾರುಕಟ್ಟೆಯನ್ನು ಬೇರೆಡೆ ವರ್ಗಾಯಿಸಬೇಕು. ಜೊತೆಗೆ ಪ್ರತಿ ಸೋಮವಾರ ಹೊಸನಗರದಲ್ಲಿ ನಡೆಯುವ ಜಾನುವಾರ ಸಂತೆಗೆ ಆಗಮಿಸುವ ವಾಹನಗಳಿಂದ ಆಗುವ ಟ್ರಾಫಿಕ್ ಸಮಸ್ಯೆ ತಪ್ಪಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು. ಒಂದು ವೇಳೆ ಕೂಡಲೇ ಯಾವುದೇ ಕ್ರಮ ಕೈಗೊಳ್ಳದಿದ್ದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿ, ಮನವಿ ಸಲ್ಲಿಸಿದರು.
ಸೇನೆಯ ತಾಲ್ಲೂಕು ಅಧ್ಯಕ್ಷ ಹಸನಸಾಬ್ ನದಾಫ್, ಶಹೀದ್ ರೂಗಿ, ಸುನೀಲ ಕನಮಡಿ, ಇಬ್ರಾಹಿಂ ಮಸಳಿ, ಇಮಾಮ್ ಮುಲ್ಲಾ, ಮೈಬೂಬ್ ಆಲಮೇಲಕರ, ಶಿವು ರೊಳ್ಳಿ, ಕುಮಾರ ರಾಠೋಡ, ಮಲ್ಲು ಉತ್ನಾಳ, ಇರ್ಫಾನ್ ಮಸಳಿ, ವಾಸೀಂ ಮುಲ್ಲಾ, ಬೀರು ಹಳ್ಳಿ, ಪರಶುರಾಮ ನಾಯ್ಕೋಡಿ, ಹಮೀದ್ ಮುಲ್ಲಾ, ಪ್ರಕಾಶ ಶಾಂತಗಿರಿ ಇದ್ದರು.